

ಧಾರವಾಡ: ಪ್ರತಿಯೊಂದು ಮಗು ಭಾವನಾತ್ಮಕ ಹಾಗೂ ಕ್ರಿಯಾತ್ಮಕವಾಗಿ ಸರ್ವಾಂಗೀಣ ಅಭಿವೃದ್ಧಿ ಹೊಂದಬೇಕು. ಶಾಲೆಗಳಲ್ಲಿ ಏರ್ಪಡಿಸುವ ಎಲ್ಲ ಆಟೋಟಗಳು, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮುಖಾಂತರ ಪ್ರತಿಭೆ ಗುರುತಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣವೇ ಪ್ರೇರಕ ಎಂದು ಸಾಹಿತಿ ಎ.ಸಿ. ವಿರಕ್ತಮಠ ಹೇಳಿದರು.
ನಗರದ ಕೆಎಲïಇ ಸಂಸ್ಥೆಯ ಆರ್.ಎಲ್.ಎಸ್. ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಾರ್ಷಿಕ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಪ್ರಭಾವತಿ ಗುಡ್ಡದಾನ್ವೇರಿ ಮಾತನಾಡಿ, ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳ ಜೊತೆಗೆ ಧನಾತ್ಮಕ ಚಿಂತನೆ ಮೈಗೂಡಿಸಿಕೊಳ್ಳಬೇಕು ಎಂದರು.
ಆರ್.ಬಿ. ಬಾನಪ್ಪನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯ ಬಿ.ಆರ್. ಕಾರಡಗಿ, ಪ್ರಾಚಾರ್ಯ ಸಿ.ವಿ. ಕಣಬರಗಿ ಉಪಸ್ಥಿತರಿದ್ದರು.
ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ೨೦೨೩- ೨೪ನೇ ಸಾಲಿನ ಆದರ್ಶ ವಿದ್ಯಾರ್ಥಿ ಮಲ್ಲಿಕಾರ್ಜುನ ಅಂಬೋರೆ ಹಾಗೂ ಆದರ್ಶ ವಿದ್ಯಾರ್ಥಿನಿ ಸಾವಿತ್ರಿ ಹಂಪಣ್ಣವರಗೆ ವಿಶೇಷ ಬಹುಮಾನ ವಿತರಿಸಲಾಯಿತು.
ವಿ.ಪಿ. ಹಿರೇಮಠ ಸ್ವಾಗತಿಸಿದರು. ಎಸ್.ಎಸ್. ಜಂಬಗಿ ಪ್ರಾರ್ಥಿಸಿದರು. ವಿ.ಎಸ್. ಪಾಟೀಲ ನಿರೂಪಿಸಿದರು, ಡಾ. ಎಂ.ಎA. ಬಿರಾದಾರï ವಂದಿಸಿದರು.