

ಶ್ರೀ ಪಾರ್ಶ್ವನಾಥ ಪೂಜಾ ಸೇವಾ ಟ್ರಸ್ಟ್ ವತಿಯಿಂದ ವಾರ್ಷಿಕ ಪೂಜಾ ರಜತ ಮಹೋತ್ಸವ ಆಚರಣೆ ಅಂಗವಾಗಿ ಜೆಎಲ್‌ಬಿ ರಸ್ತೆಯ ಜೈನ ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ಭಾನುವಾರ ಉಪನ್ಯಾಸ ಕಾರ್ಯಕ್ರಮ ನೆರವೇರಿತು.
ರಜತ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಒಂದು ವರ್ಷ ಕಾಲ ಸರಣಿ ಉಪನ್ಯಾಸ ಕಾರ್ಯಕ್ರಮದ ಪ್ರಯುಕ್ತ ಮೈಸೂರು ವಿವಿ ವಿಶ್ರಾಂತ ಪ್ರಾಧ್ಯಾಪಕ ಡಾ.ಕೆ.ಅನಂತರಾಮು ಅವರು ‘ವಡ್ಡಾರಾಧನೆ’ ವಿಷಯ ಕುರಿತು ಐದನೇ ಉಪನ್ಯಾಸ ಮಾಲಿಕೆ ನಡೆಸಿಕೊಟ್ಟರು.
ಪ್ರಮುಖರಾದ ಜಿನೇಂದ್ರ ಪ್ರಕಾಶ್, ನಿಲಯದ ಅಧ್ಯಕ್ಷ ಲಕ್ಷ್ಮೀರಮಣ, ಸದಸ್ಯ ನಮಿತೇಜ, ಪಾರ್ಶ್ವನಾಥ ಟ್ರಸ್ಟ್‌ನ ಗೌರವ ಕಾರ್ಯದರ್ಶಿ ಎಂ.ಪಿ.ನಾಭಿರಾಜ್, ಕಾರ್ಯಕ್ರಮದ ಪ್ರಾಯೋಜಕರಾದ ಎಂ.ಎನ್.ಮೀನಾ ಸುಧಾಕರ್, ಕೆ.ಬಿ.ಎಲ್.ಕುಮಾರ್, ಮಂಜುಳಾ ಪ್ರಕಾಶ್ ಇತರರಿದ್ದರು. 2026 ಮಾರ್ಚ್‌ವರೆಗೆ ಪ್ರತಿ ತಿಂಗಳ ಎರಡನೇ ಭಾನುವಾರ ಸಂಜೆ 4 ರಿಂದ 5.30ರವರೆಗೆ ಸರಣಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.