ಕ್ರೀಡೆಯಿಂದ ಆರೋಗ್ಯವಂತ ಸಮಾಜ ನಿರ್ಮಾಣ : ಸುರೇಶ ಶೆಟ್ಟಿ ಸಿದ್ಧಕಟ್ಟೆ ಅಭಿಮತ

New Project (7)
Published on

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ಶಿಕ್ಷಣದ ಜತೆಗೆ ಕ್ರೀಡೆಗೆ ಆದ್ಯತೆ ನೀಡುವುದು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ದಕಟ್ಟೆ ಹೇಳಿದರು.

ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಎಂ.ದುಗಾದಾಸ್ ಶೆಟ್ಟಿ ಮಾವಂತೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಮೂಲಕ ಖಾಸಗಿ ಶಾಲೆಯನ್ನು ಮೀರಿಸುವ ನಿಟ್ಟಿನಲ್ಲಿ ಬೆಳೆದಿದೆ ಎಂದರು.

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯಶಿಕ್ಷಕ ಕೆ.ರಮೇಶ ನಾಯಕ್ ರಾಯಿ, ಕ್ಲಬ್ಬಿನ ಉಪಾಧ್ಯಕ್ಷ ವಿಜಯ ಫರ್ನಾಂಡಿಸ್ ಶುಭ ಹಾರೈಸಿದರು.

ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ರಾಜೇಶ ಜೈನ್ ಪಡ್ರಾಯಿ, ಮೋಹನ್ ಕೆ.ಶ್ರೀಯಾನ್ ರಾಯಿ, ಚಂದ್ರಶೇಖರ ಗೌಡ ಕಾರಂಬಡೆ, ಭೋಜ ಶೆಟ್ಟಿ ಹೋರಂಗಳ, ಲ್ಯಾನ್ಸಿ ಕುವೆಲ್ಲೊ ಕುದ್ಕೋಳಿ, ಸುರೇಶ ಪೂಜಾರಿ ರಾಯಿ, ಹಿರಿಯ ಶಿಕ್ಷಕಿ ಸೌಮ್ಯಾ ಮತ್ತಿತರರು ಇದ್ದರು.

ಮುಖ್ಯಶಿಕ್ಷಕಿ ಸೌಜನ್ಯಾ ರಾವ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ದೈಹಿಕ ಶಿಕ್ಷಣ ನಿರ್ದೇಶಕ ಜನಾರ್ದನ ವಂದಿಸಿದರು. ಶಿಕ್ಷಕ ರಮೇಶ ಮಯ್ಯ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net