ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು

h30-tejas sutare
Published on

ಹುಬ್ಬಳ್ಳಿ: ಇಲ್ಲಿಯ ಅಚ್ಚವ್ವನ ಕಾಲನಿಯಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೊಟದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮತ್ತೊಬ್ಬರು ಸೋಮವಾರ ಕೆಎಂಸಿಆರ್‌ಐನಲ್ಲಿ ಮೃತಪಟ್ಟಿದ್ದು, ಈ ಮೂಲಕ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ತೇಜಸ್ ಸುತಾರೆ (26) ಮೃತರು. ಈಗ ಸುಟ್ಟ ಗಾಯಗಳು ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗದಲ್ಲಿ ಮಗ ಮತ್ತು ತಂದೆ ಮಾತ್ರ ಚಿಕಿತ್ಸೆ ಪಡೆಯುತಿದ್ದಾರೆ. ಪುತ್ರ ವಿನಾಯಕ ಬಾರಕೇರ (12) ಚೇತರಿಸಿಕೊಳ್ಳುತ್ತಿದ್ದು, ತಂದೆ ಪ್ರಕಾಶ ಬಾರಕೇರ (42) ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net