ಡಿಸಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಅಭಿನಂದನಾ ಪತ್ರ

raichur
raichur
Published on

 ರಾಯಚೂರು ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಜಿಲ್ಲೆಯಲ್ಲಿ ಉತ್ತಮ ಕಾರ್ಯ ಸಾಧನೆ ಮಾಡಿದ್ದರಿಂದಾಗಿ ಜಿಲ್ಲೆಯ ಜಿಲ್ಲಾಧಿಕಾರಿ ನಿತೀಶ್.ಕೆ ಅವರಿಗೆ ಕಂದಾಯ ಇಲಾಖೆಯ ಆಯುಕ್ತರಿಂದ ಅಭಿನಂದನಾ ಪತ್ರ ಕಳುಹಿಸಿದ್ದಾರೆ.

ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ರಾಜ್ಯದ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆಯನ್ನು ನೀಡಲು ಜಿಲ್ಲೆಯ ನಾಡ ಕಚೇರಿಗಳಲ್ಲಿ ಜುಲೈ-2025ರ ಮಾಹೆಯಲ್ಲಿ ಸ್ವೀಕರಿಸಲಾಗಿರುವ 48,649 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ.99.61ರಷ್ಟು ವಿಲೇವಾರಿ ಮಾಡಿ 5.32 ಸಿಗ್ಮಾ ಮೌಲ್ಯವನ್ನು ಪಡೆದಿರುತ್ತೀರಿ.

7.10 ವಿಲೇವಾರಿ ಸೂಚ್ಯಂಕದ ಪ್ರಕಾರ ತಮ್ಮ ಜಿಲ್ಲೆಯಲ್ಲಿ 8.10 ಪಟ್ಟು ನಿಗದಿತ ಅವಧಿಗಿಂತ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ ಜುಲೈ-2025ರ ಮಾಹೆಯಲ್ಲಿ ತಮ್ಮ ರಾಯಚೂರು ಜಿಲ್ಲೆಯು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುವುದು ಶ್ಲಾಘನೀಯವಾಗಿದೆ.

ಜಿಲ್ಲೆಯಲ್ಲಿ ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿರುವುದಕ್ಕೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರಿಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಕಳೆದ ಜುಲೈ ಮಾಹೆಯಲ್ಲಿ ಅಭಿನಂದನಾ ಪತ್ರ ಕಳುಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net