ಕನಕಪುರದಲ್ಲಿ ಆನೆ ದಾಳಿಗೆ ಮತ್ತೊಬ್ಬ ರೈತ ಬಲಿ

Elephant (2)
Published on

ರಾಮನಗರ: ಕನಕಪುರ ತಾಲೂಕಿನ ಮುಗ್ಗೂರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ರೈತರೊಬ್ಬರು ಆನೆ ದಾಳಿಗೆ ಬಲಿಯಾಗಿದ್ದಾರೆ.

ಕಾವೇರಿ ವನ್ಯ ಜೀವಿಧಾಮದ ಮುಗ್ಗೂರು ವಲಯ ಅರಣ್ಯ ವ್ಯಾಪ್ತಿಯ ಕಬ್ಬಾಳಯ್ಯನದೊಡ್ಡಿಯ ರಾಜುಶೆಟ್ಟಿ (60) ಮೃತಪಟ್ಟ ರೈತ.

ಶನಿವಾರ ಸಂಜೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಜಮೀನಿನ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರಾಜು ಶೆಟ್ಟಿ ಅವರ ಮೇಲೆ ಆನೆ ದಾಳೆ ನಡೆಸಿದೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ರಾಜುಶೆಟ್ಟಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಮತ್ತು ಕೋಡಿಹಳ್ಳಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಳೆದ 15 ದಿನಗಳ ಅವಧಿಯಲ್ಲಿ ಆನೆ ದಾಳಿಗೆ ಮೃತಪಟ್ಟ ಮೂರನೇ ರೈತರಾಗಿದ್ದು, ಅರಣ್ಯ ಇಲಾಕೆ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net