

ಬೆಂಗಳೂರು: ಲೋಕಸಭೆ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ದೃಷ್ಟಿಯಿಂದ ಅನ್ಯ ಪಕ್ಷದ ಮುಖಂಡರನ್ನು ತನ್ನತ್ತ ಸೆಳೆಯುವ ಕಾರ್ಯಕ್ಕೆ ಕೈ ಹಾಕಿರುವ ಕಾಂಗ್ರೆಸ್, ಶುಕ್ರವಾರ ಬಿಜೆಪಿ ಹಾಗೂ ಜೆಡಿಎಸ್‌ನ ಮಾಜಿ ಕಾರ್ಪೊರೇಟರ್‌ಗಳನ್ನು ಸೇರ್ಪಡೆ ಮಾಡಿಕೊಳ್ಳುತ್ತಿದೆ.
ಕೆಪಿಸಿಸಿ ಕಚೇರಿಯಲ್ಲಿ ಬೆಳಗ್ಗೆ 9 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನ್ಯ ಪಕ್ಷದ ಮುಖಂಡರನ್ನು ಬರಮಾಡಿಕೊಳ್ಳುವರು.
ಪದ್ಮನಾಭ ನಗರದಲ್ಲಿ ಮಾಜಿ ಸಚಿವ ಆರ್.ಅಶೋಕ್ ವಿರುದ್ಧ ಮುನಿಸಿಕೊಂಡಿರುವ ಮಾಜಿ ಕಾರ್ಪೊರೇಟರ್‌ಗಳು ಪ್ರಮುಖವಾಗಿ ಬಿಜೆಪಿ ತೊರೆಯುತ್ತಿದ್ದಾರೆ.