ಕವಾಡಿಗರಹಟ್ಟಿ ವಿಷಜಲ ದುರಂತ ಮಾಸುವ ಮುನ್ನವೇ ಚಿತ್ರದುರ್ಗದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ

CTR Polluted Water
Published on

ಚಿತ್ರದುರ್ಗ: ನಗರದ ಕವಾಡಿಗರಹಟ್ಟಿಯಲ್ಲಿ ಸಂಭವಿಸಿದ್ದ ವಿಷಜಲ ದುರಂತ ಮಾಸುವ ಮುನ್ನವೇ ಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರಿನ ಪ್ರಕರಣ ಬೆಳಕಿಗೆ ಬಂದಿದೆ.

ಚಿತ್ರದುರ್ಗ ತಾಲ್ಲೂಕಿನ ಮುದ್ದಾಪುರ ಹೊಸಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಶಂಕೆ ವ್ಯಕ್ತವಾಗಿದ್ದು ವಾಂತಿ, ಭೇದಿಯಿಂದ 10ಕ್ಕೂ ಹೆಚ್ಚು ಮಂದಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

CTR Polluted Water

ಕಳೆದ ಎರಡು ದಿನಗಳಿಂದ ಗ್ರಾಮದ ಜನರಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಚಿತ್ರದುರ್ಗ ಎಸಿ ಕಾರ್ತಿಕ್, ತಹಶಿಲ್ದಾರ್ ನಾಗವೇಣಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ಗ್ರಾಮದಲ್ಲಿ ತಾತ್ಕಾಲಿಕ ಕ್ಲಿನಿಕ್​ ಒಂದನ್ನು ತೆರಯಲಾಗಿದೆ.

ಕಲುಷಿತ ನೀರು ಸೇವನೆ ಶಂಕೆ ಹಿನ್ನಲೆಯಲ್ಲಿ ಅಧಿಕಾರಿಗಳು ಗ್ರಾಮದಲ್ಲಿರುವ ಬೋರ್​ವೆಲ್​ ಹಾಗೂ ಟ್ಯಾಂಕ್​ ನೀರನ್ನು ಸಂಗ್ರಹಿಸಿ ಪರೀಕ್ಷೆಗೆಂದು ಲ್ಯಾಬೋರೇಟರಿಗೆ ರವಾನಿಸಿದ್ದಾರೆ. ಕಲುಷಿತ ನೀರಿನಿಂದ ದುರಂತ ಸಂಭವಿಸಿದ್ದರೂ ಸಹ ಅಧಿಕಾರಿಗಳು ಇನ್ನು ಎಚ್ಚೆತ್ತುಕೊಳ್ಳದಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net