

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಗಮನಕ್ಕೆ ಮತ್ತೊಂದು ರಸ್ತೆ ಮಾರ್ಗವನ್ನು ಸಹ ಮೈಸೂರು ನಗರ ಪೊಲೀಸರು ಸಿದ್ಧಪಡಿಸಿದ್ದು, ಮಂಡಕಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಮಹಾರಾಜ ಕಾಲೇಜು ಮೈದಾನಕ್ಕೆ ಬರುವ ವ್ಯವಸ್ಥೆ ಮಾಡಿದ್ದಾರೆ.
ಜತೆಗೆ ಅದೇ ಮಾರ್ಗದಲ್ಲಿ ಹಿಂದಿರುಗಲು ಸಹ ವ್ಯವಸ್ಥೆ ಮಾಡಿದ್ದಾರೆ. ಒಂದು ವೇಳೆ ಹೆಲಿಕಾಪ್ಟರ್ ಸಂಚಾರದಲ್ಲಿ ಏನಾದರೂ ವ್ಯತ್ಯಯವಾದರೆ ರಸ್ತೆ ಮಾರ್ಗದ ಮೂಲಕ ಆಗಮಿಸಲು ಮತ್ತು ನಿರ್ಗಮಿಸಲು ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.