ರಾಮಾಯಣದಿಂದ ಎಲ್ಲ ಸಮಸ್ಯೆಗಳಿಗೆ ಉತ್ತರ

31 RON 2
Published on

ರೋಣ: ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯ ಇಡೀ ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಸಾಹಿತ್ಯ ಕೊಡುಗೆ. ರಾಮಾಯಣ ಯಾವುದೇ ದೇಶ, ಭಾಷೆಗೆ ಸೀಮಿತವಾಗದೆ ಜಾಗತಿಕವಾಗಿ ಆರಾಧಿಸಲ್ಪಟ್ಟಿದೆ ಎಂದು ವಾಲ್ಮೀಕಿ ಸಮಾಜದ ತಾಲೂಕಾಧ್ಯಕ್ಷ ಬಸವಂತಪ್ಪ ತಳವಾರ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ತಾಲೂಕಾಡಳಿತ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜನಸಮುದಾಯದ ಎಲ್ಲ ಸಮಸ್ಯೆಗಳು, ಸಂಕಟಗಳಿಗೆ ವಾಲ್ಮೀಕಿ ರಾಮಾಯಣದಲ್ಲಿ ಉತ್ತರ ಸಿಗುತ್ತದೆ. ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ-ಮನುಷ್ಯರ ನಡುವಿನ ಸಂಬಂಧಗಳು ಮಾಯವಾಗುತ್ತಿರುವ ಪ್ರಸ್ತುತ ದಿನಗಳಲ್ಲಿ ವಾಲ್ಮೀಕಿ ರಾಮಾಯಣ ದಾರಿದೀಪವಾಗಿದೆ ಎಂದರು.

ತಹಸೀಲ್ದಾರ್ ಜೆ.ಬಿ. ಜಕ್ಕನಗೌಡ್ರ, ಸಮಾಜದ ಎಂ.ಎಂ. ಕಲ್ಯಾಶಾನಿ, ಶ್ರೀಧರ ನಾಯಕ, ಬಸವರಾಜ ತಳವಾರ, ಬಸವರಾಜ ನಾಯ್ಕರ, ಭೀಮಪ್ಪ ತಳವಾರ, ಸಂತೋಷ ಕಡಿವಾಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net