ಮಕ್ಕಳನ್ನು ದುಡಿಮೆಗೆ ಕಳಿಸುವುದು ಅಪರಾಧ

12 Dwd 6
Published on

ಧಾರವಾಡ: ವಿದ್ಯೆ ಕಲಿಯುವ ಹೊತ್ತಿನಲ್ಲಿ ಮಕ್ಕಳನ್ನು ದುಡಿಮೆಗೆ ಕಳಿಸುವುದು ಅಪರಾಧ. ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲು ಕಾನೂನು ರಚಿಸಿ ಜಾರಿಗೊಳಿಸಿದೆ. ಮಕ್ಕಳಲ್ಲಿ ಸಂಸ್ಕೃತಿ, ಸಂಸ್ಕಾರ ಬೆಳೆಸಲು ನಾವು ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ನಗರದ ಭಾರತ ಪ್ರೌಢಶಾಲೆಯ ಸಭಾಭವನದಲ್ಲಿ ಜಿಲ್ಲಾಡಳಿತದಿಂದ ಬುಧವಾರ ಆಯೋಜಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳನ್ನು ಬೆಳೆಸುವಾಗ ಹೆಣ್ಣು- ಗಂಡು ಎಂದು ಭೇದ ಮಾಡಬಾರದು. ಮಕ್ಕಳು ಟಿವಿ, ಮೊಬೈಲ್ ನೋಡುತ್ತ ಸಮಯ ಹಾಳು ಮಾಡದೆ, ಓದಿನತ್ತ ಗಮನ ಹರಿಸಬೇಕು. ಮಕ್ಕಳಿಗೆ ದೈಹಿಕ, ಮಾನಸಿಕ ಕಿರುಕುಳ ಆದಾಗ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿ ತಿಳಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧಿಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಎಫ್. ದೊಡ್ಡಮನಿ ಮಾತನಾಡಿ, ಕಡ್ಡಾಯ ಶಿಕ್ಷಣ ಮಕ್ಕಳ ಮೂಲ ಹಕ್ಕು. ಹಾಗಾಗಿ ಮಕ್ಕಳು ವಿದ್ಯೆಯಿಂದ ವಂಚಿತರಾಗದ೦ತೆ ನೋಡಿಕೊಳ್ಳಬೇಕು ಎಂದರು.
ಡಿಡಿಪಿಐ ಎಸ್.ಎಸ್. ಕೆಳದಿಮಠ ಬಾಲಕಾರ್ಮಿಕ ಪದ್ಧತಿ ತಡೆ ಕುರಿತ ಪ್ರತಿಜ್ಞಾ ವಿಧಿ ಬೋಧಿಸಿದರು. ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ವಂದಿಸಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ, ಬಿಇಒ ಅಶೋಕ ಸಿಂದಗಿ, ಮರಾಠಾ ವಿದ್ಯಾಪ್ರಸಾರಕ ಮಂಡಳಿ ಅಧ್ಯಕ್ಷ ಎಂ.ಎನ್. ಮೋರೆ, ಜಿಲ್ಲಾ ಮಕ್ಕಳ ರಕ್ಷಣಾಽಕಾರಿ ನೀತಾ ವಾಡಕರ, ಕಾರ್ಮಿಕ ಅಽಕಾರಿ ಮಾರಿಕಾಂಬಾ ಹುಲಕೋಟಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net