ಮಾದಕ ವಸ್ತು ವಿರೋಧಿ ಜಾಗೃತಿ ಅಭಿಯಾನ; ನಟ, ನಿರ್ದೇಶಕ ಉಪೇಂದ್ರ ಭಾಗಿ

4 Dwd 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಜೆಎಸ್‌ಎಸ್ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ಜಾಗೃತಿ ಅಭಿಯಾನದಲ್ಲಿ ನಟ, ನಿರ್ದೇಶಕ ಉಪೇಂದ್ರ ಭಾಗವಹಿಸಿದ್ದರು.

ನೆಚ್ಚಿನ ನಟ ಆಗಮನದ ಸುದ್ದಿ ತಿಳಿದು ಸಾವಿರಾರು ವಿದ್ಯಾರ್ಥಿಗಳು ಜಮಾಯಿಸಿದ್ದರು. ನಟ ಉಪೇಂದ್ರ ಹುಬ್ಬಳ್ಳಿಯ ಕಾರ್ಯಕ್ರಮ ಮುಗಿಸಿ ಬರುವುದು ವಿಳಂಬವಾದ ಹಿನ್ನೆಲೆಯಲ್ಲಿ ಮನರಂಜನೆಗಾಗಿ ನಾ ಡ್ರೈವರ್ ಹಾಗೂ ಇತರ ಜಾನಪದ ಹಾಡುಗಳಿಗೆ ವಿದ್ಯಾರ್ಥಿಗಳು ಕುಣಿದರು.

ವಿದ್ಯಾರ್ಥಿ ಜೀವನದಲ್ಲಿ ಮಾದಕ ವಸ್ತುಗಳಿಗೆ ವ್ಯಸನರಾಗಿ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಉಪೇಂದ್ರ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ಉಪೇಂದ್ರ ಜತೆ ಸೆಲಿ ತೆಗೆದುಕೊಂಡು ಸಂಭ್ರಮಿಸಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಇಲಾಖೆ ನಡೆಸುತ್ತಿರುವ ಮಾದಕ ವಸ್ತು ವಿರೋಧಿ ಅಭಿಯಾನದಲ್ಲಿ ಇತ್ತೀಚೆಗೆ ನಟ ಡಾ ಶಿವರಾಜಕುಮಾರ್ ಭಾಗವಹಿಸಿದ್ದರು. ಇದೀಗ ನಟ ಉಪೇಂದ್ರ, ಈ ಅಭಿಯಾನಕ್ಕೆ ಕೈ ಜೋಡಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜೆಎಸ್‌ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net