ಮಾದಕ ವಸ್ತು ವಿರೋಧಿ ದಿನಾಚರಣೆ

28M.D.R.2
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಮಾದಕವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ನಗರಕೆರೆಯ ಪೂರ್ಣಿಮಾ ಪ್ರೌಢಶಾಲೆ ಗೌರವಾಧ್ಯಕ್ಷ ದಯಾಕರ್ ಉದ್ಘಾಟಿಸಿದರು. ಹಾಲಪ್ಪ, ಮಂಜುನಾಥ್, ಶಿವಪ್ಪ, ಎನ್.ತೇಜಾವತಿ ಇತರರು ಇದ್ದರು.
Published on

ಮದ್ದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಮಂಡ್ಯದ ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಮಾದಕವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕಿನ ನಗರಕೆರೆಯ ಪೂರ್ಣಿಮಾ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.

ಶಾಲೆಯ ಗೌರವಾಧ್ಯಕ್ಷ ದಯಾಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವ ಜನಾಂಗ ಮಾದಕ ವಸ್ತುಗಳ ಸೇವನೆಯಿಂದ ದೂರವಿರಬೇಕು.ಉನ್ನತ ವಿದ್ಯಾಭ್ಯಾಸ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಎಂ.ಎ.ಹಾಲಪ್ಪ ಮಾತನಾಡಿ, ಆಧುನಿಕ ಜೀವನ ಶೈಲಿಯಲ್ಲಿ ಯುವ ಪೀಳಿಗೆಯು ದಾರಿ ತಪ್ಪುವ ಅನೇಕ ಸಂದರ್ಭಗಳು ಕಾಣುತ್ತಿದ್ದು, ವಿದ್ಯಾರ್ಥಿಗಳಿಗೆ ಪಾಲಕರು ಹಾಗೂ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಿ ಅವರನ್ನು ಸರಿ ದಾರಿಗೆ ತರುವ ಕೆಲಸ ಮಾಡಬೇಕು ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿ ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ್, ಮುಖ್ಯಶಿಕ್ಷಕ ಶಿವಪ್ಪ, ಜ್ಞಾನವಿಕಾಸ ಸಮನ್ವಯಾಧಿಕಾರಿ ಎನ್.ತೇಜಾವತಿ. ಮೇಲ್ವಿಚಾರಕ ಮಂಜುನಾಥ್, ಸಮುದಾಯ ಆರೋಗ್ಯ ಅಧಿಕಾರಿ ಮೇಘನಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net