

ಸುಳ್ಯ: ಮಾದಕ ದ್ರವ್ಯ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸ್ ಇಲಾಖೆ ಜತೆಗೆ ಸಾರ್ವಜನಿಕರ ಪಾತ್ರವೂ ಮುಖ್ಯ ಎಂದು ಪೊಲೀಸ್ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಹೇಳಿದರು.
ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ, ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆಯಲ್ಲಿ ಮಾಹಿತಿ ನೀಡಿದರು.
ಸುಳ್ಯ ಠಾಣಾ ಪೊಲೀಸ್ ಉಪನಿರೀಕ್ಷಕ ಸಂತೋಷ್ ಬಿ.ಪಿ. ಮಾತನಾಡಿದರು. ಎ.ಒ.ಎಲ್.ಇ ಕಮಿಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ., ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಭವಾನಿ ಶಂಕರ ಅಡ್ತಲೆ ಉಪಸ್ಥಿತರಿದ್ದರು. ಪ್ರಾಂಶುಪಾಲ ಅಣ್ಣಯ್ಯ ಕೆ. ಅಧ್ಯಕ್ಷತೆ ವಹಿಸಿದ್ದರು. ಅಟೋಮೊಬೈಲ್ ವಿಭಾಗ ಮುಖ್ಯಸ್ಥ ಎಂ.ಎನ್.ಚಂದ್ರಶೇಖರ, ಮೆಕಾನಿಕಲ್ ವಿಭಾಗದ ಮುಖ್ಯಸ್ಥ ಯತೀಶ್ ಕೆ.ಎನ್., ಕಚೇರಿ ಅಧೀಕ್ಷಕ ಧನಂಜಯ ಕಲ್ಲುಗದ್ದೆ ಉಪಸ್ಥಿತರಿದ್ದರು. ಉಪನ್ಯಾಸಕ ದೀಕ್ಷಿತ್ ಕುಮಾರ್ ಪ್ರಾರ್ಥಿಸಿದರು. ಉಪ ಪ್ರಾಂಶುಪಾಲ ಹರೀಶ್ ಕುಮಾರ್ ಸ್ವಾಗತಿಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ವಿವೇಕ್ ಪಿ. ವಂದಿಸಿದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಕಾರ್ಯಕ್ರಮ ನಿರೂಪಿಸಿದರು.