ಬಿಜೆಪಿಯಿಂದ ರೈತ ವಿರೋಧಿ ಧೋರಣೆ

FotoJet (1)
Published on

ಬಮುಲ್ ನಿರ್ದೇಶಕ ಎಚ್‌ಎಸ್ ಹರೀಶ್ ಕುಮಾರ್ ಆರೋಪ

ಹಾರೋಹಳ್ಳಿ : ಪ್ರಸ್ತುತ ಹೆಚ್ಚಳ ಮಾಡಿರುವ ಹಾಲಿನ ದರದ ಮೊತ್ತವನ್ನೂ ರೈತರಿಗೆ ನೀಡುತ್ತಿದ್ದರೂ ಬಿಜೆಪಿಯವರು ಇದರಲ್ಲೂ ರಾಜಕೀಯ ಮಾಡುತ್ತಿದ್ದು, ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಬಮುಲ್ ನಿರ್ದೇಶಕ ಎಚ್.ಎಸ್. ಹರೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಬಮುಲ್ ಶಿಬಿರ ಕಚೇರಿಯಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೆಚ್ಚಳವಾಗಿರುವ ನಾಲ್ಕು ರೂಪಾಯಿಯನ್ನು ರೈತರಿಗೆ ನೀಡಲಾಗುವುದು. ಪಶು ಆಹಾರ ಬೆಲೆ ಹೆಚ್ಚಳದಿಂದ ತತ್ತರಿಸಿರುವ ರೈತರು ಹೈನುಗಾರಿಕೆಯಿಂದ ಹಿಮ್ಮುಖರಾಗುತ್ತಿದ್ದಾರೆ. ಅವರನ್ನು ಮತ್ತೆ ಹೈನುಗಾರಿಕೆಯತ್ತ ಪ್ರೋತ್ಸಾಹಿಸಲು ಸರ್ಕಾರ ಹಾಲಿನದರ ಹೆಚ್ಚಳ ಮಾಡಿ ರೈತರಿಗೆ ನೀಡುತ್ತಿದೆ ಎಂದು ಹೇಳಿದರು.

ಇರುವ ವಿಚಾರವನ್ನು ಮರೆಮಾಚಿ ತಪ್ಪು ಸಂದೇಶ ರವಾನಿಸುತ್ತಿರುವ ಬಿಜೆಪಿ ವಿರುದ್ಧ ರೈತರೊಂದಿಗೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾಂಗ್ರೆಸ್ ಹಿರಿಯ ಮುಖಂಡ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೀರಣಗೆರೆ ಜಗದೀಶ್ ಮಾತನಾಡಿ, ಹಾಲು ಮತ್ತು ರೇಷ್ಮೆಯನ್ನು ನಂಬಿ ರೈತರು ಜೀವನ ನಡೆಸುತ್ತಿದ್ದು, ಹಾಲಿನ ದರ ಹೆಚ್ಚಳ ಮಾಡಿ ರೈತರಿಗೆ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ ವಿರೋಧ ಪಕ್ಷದವರು ಸುಮ್ಮನೆ ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ್, ಜಿಪಂ ಮಾಜಿ ಅಧ್ಯಕ್ಷ ಎಚ್.ಕೆ.ನಾಗರಾಜು, ಮುಖಂಡರಾದ ಮೋಹನ ಹೊಳ್ಳ, ಸುರೇಶ್, ಶಬ್ದರ ಹುಸೇನ್, ರಮೇಶ್, ಹಾರೋಹಳ್ಳಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net