ಮಾನವ ಕಳ್ಳ ಸಾಗಾಣಿಕೆ ತಡೆಗೆ ಬದ್ಧರಾಗಿ

31 Dwd 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಮಾನವ ಕಳ್ಳ ಸಾಗಾಣಿಕೆ ಮಾಡುವುದು, ದೌರ್ಜನ್ಯ ಎಸಗುವುದು ಹೀನಕೃತ್ಯ, ಸಮಾಜಕ್ಕೆ ಅಂಟಿದ ರೋಗ. ಇದನ್ನು ತಡೆಗಟ್ಟಲು ಪ್ರತಿಯೊಬ್ಬ ನಾಗರಿಕರು ಬದ್ಧರಾಗಿರಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್. ದೊಡ್ಡಮನಿ ಹೇಳಿದರು.

ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ಕಳ್ಳ ಸಾಗಾಣಿಕೆ ತಡೆಯುವುದು ಎಲ್ಲರ ಕರ್ತವ್ಯ. ಮಕ್ಕಳು, ಮಹಿಳೆ, ಪುರುಷ ಎನ್ನದೆ ವಿವಿಧ ಕಾರಣಗಳಿಗಾಗಿ ಅಪಹರಣ, ಕಳ್ಳ ಸಾಗಾಣಿಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಮ್ಮ ಕುಟುಂಬದಲ್ಲೂ ಆಗಬಹುದು. ಆದ್ದರಿಂದ ಎಚ್ಚರಿಕೆಯಿಂದ ಇರಬೇಕು. ಮಾನವ ಕಳ್ಳ ಸಾಗಾಣಿಕೆ ಕಂಡುಬ0ದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಸಾಕ್ಷಿದಾರ ಒಂದು ಬಾರಿ ಮಾತ್ರ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷಿ ನುಡಿದರೆ ಸಾಕು ಎಂದರು.

ಅ0ತರಾಷ್ಟ್ರೀಯ ನ್ಯಾಯ ಮಿಷನ್ಸ್ ಸಂಸ್ಥೆಯ ವಿನೋದಕುಮಾರ್ ಪಿ. ಹಾಗೂ ಸರ್ ಸಿದ್ದಪ್ಪ ಕಂಬಳಿ ಕರ್ನಾಟಕ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ. ಶಶಿರೇಖಾ ಮಾಳಗಿ ಅವರು ಮಾನವ ಕಳ್ಳ ಸಾಗಾಣಿಕೆ ಅಪರಾಧ ಹಾಗೂ ರಕ್ಷಣಾತ್ಮಕ ಕಾನೂನುಗಳ ಕುರಿತು ಉಪನ್ಯಾಸ ನೀಡಿದರು.

ಸಿಇಎನ್ ವಿಭಾಗದ ಡಿವೈಎಸ್‌ಪಿ ಶಿವಾನಂದ ಕಟಗಿ, ಎಸಿಪಿ ಪ್ರಶಾಂತ ಸಿದ್ದನಗೌಡರ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಎಸ್.ಎಂ. ಹಿರೇಮಠ, ಜಿಲ್ಲಾ ನಿರೂಪಣಾಧಿಕಾರಿ ಡಾ. ಕಮಲಾ ಬೈಲೂರ ವೇದಿಕೆಯಲ್ಲಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಡಾ. ಎಚ್.ಎಚ್. ಕುಕನೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯಲಕ್ಷ್ಮೀ ಪಾಟೀಲ ವಂದಿಸಿದರು. ಸುನಿತಾ ನಾಡಿಗೇರ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net