

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ದೇಶ ವಿರೋಧಿ ಬರಹ ಪೋಸ್ಟ್ ಮಾಡಿ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದ್ದ ನಗರ ಳ್ನೀರ್ನ ಖಾಸಗಿ ಆಸ್ಪತ್ರೆಯ ವೈದ್ಯೆಯ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕೆಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ, ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ವೈದ್ಯೆ ಪೋಸ್ಟ್ ಹಾಕಿದ್ದಳು.
ಇದು ವಿವಾದಕ್ಕೆ ಕಾರಣವಾಗಿತ್ತು. ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಆಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಇದೀಗ ಆಸ್ಪತ್ರೆಯ ಆಡಳಿತ ಮಂಡಳಿಯಿಂದಲೇ ವೈದ್ಯೆ ವಿರುದ್ಧ ಪಾಂಡೇಶ್ವರ ಠಾಣೆಗೆ ದೂರು ನೀಡಲಾಗಿದ್ದು, ಆ ಹಿನ್ನೆಲೆಯಲ್ಲಿ ಆಕೆಯ ವಿರುದ್ಧ ಎ್ಐಆರ್ ದಾಖಲಾಗಿದೆ. ಇನ್ನೊಂದೆಡೆ ಆಸ್ಪತ್ರೆಯ ಆಡಳಿತ ಮಂಡಳಿಯೂ ಆಕೆಯನ್ನು ಕೆಲಸದಿಂದ ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.
ವೈದ್ಯೆ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಕೆಗೆ ನೋಟಿಸ್ ಜಾರಿ ಮಾಡಿ ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಮೊಬೈಲ್ ವಶಪಡಿಸಿ ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಅನುಮಪ್ ಅಗರ್ವಾಲ್ ಪ್ರತಿಕ್ರಿಯಿಸಿದ್ದಾರೆ.