ಸಂಘಟನೆ ವಿರೋಧಿ ಚಟುವಟಿಕೆ ಹಿನ್ನೆಲೆ ಉಚ್ಚಾಟನೆ

Kannada Judge
Published on

ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆಯ ಮೈಸೂರು ಜಿಲ್ಲಾಧ್ಯಕ್ಷ ಎಂ.ಲಿಂಗರಾಜು ಹಾಗೂ ರಾಜ್ಯ ಉಪಾಧ್ಯಕ್ಷ ಬಿ.ಕೆ.ಶ್ರೀನಿವಾಸ್ ಅವರನ್ನು ಉಚ್ಚಾಟಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ಜೆ.ರಾಮಚಂದ್ರು ತಿಳಿಸಿದರು.

ಇವರು ಸಂಘಟನೆ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇವರ ಸ್ಥಾನಕ್ಕೆ ಈಗ ಜಿಲ್ಲಾಧ್ಯಕ್ಷರನ್ನಾಗಿ ದರ್ಶನ್ ಹಾಗೂ ರಾಜ್ಯ ಉಪಾಧ್ಯಕ್ಷರನ್ನಾಗಿ ಉತ್ಸವ್ ಅವರನ್ನು ನೇಮಕ ಮಾಡಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪದಾಧಿಕಾರಿಗಳಾದ ನಂದೀಶ್, ಕಾಂತರಾಜು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net