ಮೈಸೂರು: ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಮಂಜುಳಾ ಮಾತನಾಡಿ, ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ಗೆ ನಡುಕ ಶುರುವಾಗಿದೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜನವಿರೋಧದ ಅಲೆ ಶುರುವಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿದೆ ಎಂದರು.
ಬಿಜೆಪಿ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಮಾತನಾಡಿ, ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅಗಿದ್ದಾರೆ. ಇವರು ರಾಜೀನಾಮೆ ಕೊಡುವ ತನಕವೂ ಹೋರಾಟ ನಡೆಯಲಿದೆ. ಬೃಹನ್ನಳೆ ನಾಟಕ ಮಾಡಿಕೊಂಡು ನಾನೊಬ್ಬ ಸತ್ಯ ಹರಿಶ್ಚಂದ್ರನ ರೀತಿ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ತಮ್ಮ ಸ್ವಾರ್ಥಕ್ಕಾಗಿ ಬಡ ದಲಿತರ ಭೂಮಿಯನ್ನು ಪಡೆದಿದ್ದಾರೆ. ಎರಡು ಪ್ರಕರಣದಲ್ಲಿ ಬಿ-ರಿಪೋರ್ಟ್ ಹಾಕಿಸಿಕೊಂಡಂತೆ ಮುಡಾ ಹಗರಣವನ್ನು ಮುಚ್ಚಿಕೊಳ್ಳಲು ಮುಂದಾಗಿದ್ದಾರೆ. ಭ್ರಷ್ಟಾಚಾರ ಮುಚ್ಚಿಸಿಕೊಳ್ಳಲು ಜಾತಿ ರಾಜಕಾರಣ ಶುರು ಮಾಡಿದ್ದಾರೆ. ಕುಂಕುಮ ಕೊಟ್ಟರೆ ಬೇಡವೆಂದು ಹೇಳುವ ಸಿದ್ದರಾಮಯ್ಯ ಕುಂಕುಮದ ರೂಪದಲ್ಲಿ ಹಣ, ಆಸ್ತಿ ಕೊಟ್ಟರೆ ಸ್ವೀಕರಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ಖರ್ಚು ಮಾಡದೆ ಭ್ರಷ್ಟಾಚಾರವೆಸಲಾಗಿದೆ. ಮುಡಾ ಹಗರಣದ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ದೂರಿದರು.