ಆತ್ಮಹತ್ಯೆ ತಡೆಗಟ್ಟುವ ದಿನದ ಅಂಗವಾಗಿ ಅರಿವು ಮೂಡಿಸುವ ಕಾರ್ಯಕ್ರಮ ನಾಳೆ

ಅಂತರಾಷ್ಟಿçÃಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಣಿಕೆ ವಿರೋಧಿ ದಿನಾಚರಣೆ” ಮತ್ತು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನದ ಅರಿವು ಕಾರ್ಯಕ್ರಮವನ್ನು ಸೆಪ್ಟೆಂಬರ್ ೧೬ ರಂದು ಶನಿವಾರ ಬೆಳಿಗ್ಗೆ ೧೧ ಗಂಟೆಗೆ ಕಲಬುರಗಿ ಸರ್ಕಾರಿ ನರ್ಸಿಂಗ್ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
Published on


ವಿಜಯವಾಣಿ ಸುದ್ದಿಜಾಲ ಕಲಬುರಗಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ,  ಜಿಲ್ಲಾ ಪಂಚಾಯತ್, ಜಿಮ್ಸ್ ಆಸ್ಪತ್ರೆ, ಸರ್ಕಾರಿ ಸ್ಕೂಲ್ ಆಫ್ ನರ್ಸಿಂಗ್, ಕಾಲೇಜು ಆಫ್ ನರ್ಸಿಂಗ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ “ಅಂತರಾಷ್ಟಿçÃಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಣಿಕೆ ವಿರೋಧಿ ದಿನಾಚರಣೆ” ಮತ್ತು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನದ ಅರಿವು ಕಾರ್ಯಕ್ರಮವನ್ನು ಸೆಪ್ಟೆಂಬರ್ ೧೬ ರಂದು ಶನಿವಾರ ಬೆಳಿಗ್ಗೆ ೧೧ ಗಂಟೆಗೆ ಕಲಬುರಗಿ ಸರ್ಕಾರಿ ನರ್ಸಿಂಗ್ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ್ ನವಲೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಶೇಖರ್ ಮಾಲಿ, ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತçಜ್ಞರಾದ ಡಾ.ಎ.ಎಸ್. ರುದ್ರವಾಡಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥರು ಹಾಗೂ ಮನೋವೈದ್ಯರಾದ ಡಾ. ಪ್ರಭುಕಿರಣ ವ್ಹಿ. ಗೋಗಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ. ಮಹ್ಮದ್ ಇರಫಾನ್ ಮಹಾಗಾವಿ ಅವರು ಉಪನ್ಯಾಸ ನೀಡುವರು.

ಕಲಬುರಗಿ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ರಾಜಕುಮಾರ್ ಎ. ಕುಲಕರ್ಣಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net