ಅಣ್ಣೂರಿನಲ್ಲಿ ತಂಬಾಕು ವಿರೋಧಿ ದಿನಾಚರಣೆ

3KMD-1
ಅಣ್ಣೂರು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಿಶ್ವ ತಂಬಾಕು ವಿರೋಧಿ ದಿನ ಕಾರ್ಯಕ್ರಮವನ್ನು ತಾಲೂಕಿನ ಯೋಜನಾಧಿಕಾರಿ ಸುವರ್ಣ ಭಟ್ ಉದ್ಘಾಟಿಸಿದರು.
Published on

ಕೆ.ಎಂ.ದೊಡ್ಡಿ: ಸಮೀಪದ ಅಣ್ಣೂರು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಇತ್ತೀಚೆಗೆ ವಿಶ್ವ ತಂಬಾಕು ವಿರೋಧಿ ದಿನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ತಾಲೂಕಿನ ಯೋಜನಾಧಿಕಾರಿ ಸುವರ್ಣ ಭಟ್, ಕಾಯಿಲೆ ಬಂದ ಮೇಲೆ ಪರಿತಪಿಸುವ ಬದಲು ಕಾಯಿಲೆ ಬರದಂತೆ ತಡೆಗಟ್ಟುವ ಕ್ರಮಗಳನ್ನು ಅನುಸರಿಸಿಕೊಳ್ಳಬೇಕು. ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಪಾಲಕರು ಮಕ್ಕಳಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ಗೋವಿಂದರಾಜ್ ಮಾತನಾಡಿ, ತಂಬಾಕು ಸೇವನೆಯಿಂದ ಶ್ವಾಸಕೋಶ, ಕಿಡ್ನಿ ಸಮಸ್ಯೆಗಳು ಬರುತ್ತವೆ. ಕ್ಷಯ ರೋಗ, ಅಸ್ತಮಾ ಕಾಯಿಲೆ ಅತಿ ಹೆಚ್ಚಾಗಿ ಬರುತ್ತದೆ. ಈ ಹಿನ್ನೆಲೆಯಲ್ಲಿ ಬೀಡಿ, ಸಿಗರೇಟ್, ಗುಟ್ಕಾ ಮತ್ತು ಮದ್ಯಪಾನದಿಂದ ದೂರ ಉಳಿದು ನಮ್ಮ ಕುಟುಂಬವನ್ನು ನಾವೇ ರಕ್ಷಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಸವಿತಾ, ಮೇಲ್ವಿಚಾರಕಿ ಅಶ್ವಿನಿ, ಸೇವಾ ಪ್ರತಿನಿಧಿಗಳಾದ ಸಂಗೀತಾ, ಶೀಲಾ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net