ಉದ್ಯೋಗ ಭರವಸೆ ನೀಡಿ ವಂಚನೆ ಪ್ರಕರಣ: ಸಚಿತಾ ರೈ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ

Published on

ಕಾಸರಗೋಡು: ಸರ್ಕಾರಿ ಕಚೇರಿಗಳಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ನಂಬಿಸಿ ಹಲವರಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಶೇಣಿ ಬಲ್ತಕಲ್ಲು ನಿವಾಸಿ ಸಚಿತಾ ರೈ(27) ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕಾಸರಗೋಡು ಪ್ರಿನ್ಸಿಪಲ್​ ಸೆಷನ್ಸ್​ ನ್ಯಾಯಾಲಯ ತಿರಸ್ಕರಿಸಿದೆ.

ಬಾಡೂರು ಎಎಲ್​ಪಿ ಶಾಲೆಯ ಶಿಕ್ಷಕಿ, ಡಿವೈಎಫ್​ಐ ಮಾಜಿ ನಾಯಕಿ ಸಚಿತಾ ರೈ, ಕೇಂದ್ರ ತೋಟ ಬೆಳೆ ಸಂಶೋಧನಾ ಸಂಸ್ಥೆ(ಸಿಪಿಸಿಆರ್​ಐ) ಸಹಿತ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಉದ್ಯೋಗ ಭರವಸೆ ನೀಡಿ ಹಲವರಿಂದ ಹಣ ಪಡೆದು ವಂಚಿಸಿರುವುದಾಗಿ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿದೆ. ಕಿದೂರು ಪದಕ್ಕಲ್​ನ ನಿಶ್ಚಿತ ಶೆಟ್ಟಿ ಅವರ ದೂರಿನಂತೆ ಕುಂಬಳೆ ಪೊಲೀಸರು ಮೊದಲು ಕೇಸು ದಾಖಲಿಸಿಕೊಂಡಿದ್ದರು. ಆ ಬಳಿಕ ಹಲವಾರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net