ಅನುಗ್ರಹ ಕಾಲೇಜು ವಾರ್ಷಿಕೋತ್ಸವ

anugraha
Published on

ಕುಶಾಲನಗರ:

ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರ ಮತ್ತು ವಿನಯತೆಯನ್ನು ಬೆಳೆಸಿಕೊಂಡಾಗ ಮಾತ್ರ ಕಲಿತ ವಿದ್ಯೆ ಸಾರ್ಥಕವಾಗುತ್ತದೆ. ಅಂತಹವರು ಸಮಾಜದಲ್ಲಿ ಅತ್ಯುತ್ತಮ ಪ್ರಜೆಯಾಗುವುದಕ್ಕೆ ಸಾಧ್ಯ. ಎಂದು ಕೂಡಿಗೆ ಸದ್ಗುರು ಅಪ್ಪಯ್ಯ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪುಷ್ಪ ಹೇಳಿದರು. ಬುಧವಾರ ನಡೆದ ಕುಶಾಲನಗರ ಅನುಗ್ರಹ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಇಂದಿನ ಶಿಕ್ಷಣ ಯುವ ಜನಾಂಗಕ್ಕೆ ಉತ್ತಮ ಮೌಲ್ಯಗಳನ್ನು ತುಂಬುವ ಕೆಲಸ ಮಾಡಬೇಕಿದೆ. ಆದರೆ ವಿಪರ್ಯಾಸವೆಂದರೆ ಕೇವಲ ಅಂಕ ಆಧಾರಿತ ಶಿಕ್ಷಣವಾಗುವುದರತ್ತÀ ಸಾಗಿದೆ.

ಕಾರ್ಯಕ್ರಮವನ್ನು ಅನುಗ್ರಹ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಎಸ್.ಕೆ. ಸತೀಶ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕೀಳರಿಮೆಯಿಂದ ಹೊರಬಂದು ಆತ್ಮವಿಶ್ವಾಸವನ್ನು ಬೆಳೆಸಿಕೊಂಡಾಗ ಮಾತ್ರ ಮುಂದೆ ಸಮಾಜದಲ್ಲಿ ಅತ್ತ್ಯುನ್ನತ ಹುದ್ದೆ ಅಲಂಕರಿಸುವುದಕ್ಕೆ ಸಾಧ್ಯ. ವಿದ್ಯಾರ್ಥಿಗಳು ಕೇವಲ ಅಂಕ ಪಡೆಯುವ ಯಂತ್ರಗಳಾಗದೆ, ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಿಂಗಮೂರ್ತಿಮಾತನಾಡಿ ವಿದ್ಯಾರ್ಥಿಗಳು ಗುರುಹಿರಿಯರಿಗೆ ಗೌರವ ಕೊಡುವುದನ್ನು ಕಲಿತುಕೊಂಡಾಗ ಮಾತ್ರ ವಿದ್ಯೆ ಸಾರ್ಥಕ. ವಿದ್ಯಾರ್ಥಿ ಜೀವನದಲ್ಲಿ ಪಡುವ ಶ್ರಮ ಸಾಧನೆಗೆ ದಾರಿದೀಪವಾಗಿ ಮುಂದಿನ ಬದುಕನ್ನು ಸೋಪಾನಗೊಳಿಸುತ್ತದೆ ಎಂದರು.

ಇದೇ ವೇಳೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ವರ್ಷದ ಅತ್ಯುತ್ತಮ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಪದವಿ ಕಾಲೇಜಿನ ಉಪಪ್ರಾಂಶುಪಾಲೆ ಹರ್ಷಿತಾ, ಪದವಿ ಪೂರ್ವ ವಿಭಾಗದ ಉಪಪ್ರಾಂಶುಪಾಲೆ ಶ್ವೇತಾ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಸೀಮಾ, ವಿದ್ಯಾರ್ಥಿ ಸಮಿತಿಯ ಸಂಚಾಲಕಿ ಸೌಮ್ಯಾ, ಉಪನ್ಯಾಸಕಿ ಪೃಥ್ವಿ, ಪ್ರವೀಣಾ, ಅಭಿಶೇಕ್, ಶ್ವೇತಾ, ರೇಷ್ಮಾ, ರಕ್ಷಾಪ್ರಿಯ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net