ಅನುಗ್ರಹ ಕಾಲೇಜಿನಲ್ಲಿ ಪ್ರಬಂಧ ಸ್ಪರ್ಧೆ

anugraha
Published on

ಕುಶಾಲನಗರ:

ಮಹಾತ್ಮ ಗಾಂಧೀಜಿ ಜನ್ಮದಿನಾಚರಣೆ ಅಂಗವಾಗಿ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಇಲ್ಲಿನ ಅನುಗ್ರಹ ಪದವಿ ಕಾಲೇಜಿನಲ್ಲಿ ಶನಿವಾರ "ಸ್ವತಂತ್ರ ಭಾರತದ ನಂತರ ಗಾಂಧೀಜಿಯವರ ಕನಸು ಸೌಹಾರ್ದತೆ ಮತ್ತು ವೈವಿಧ್ಯತೆ" ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಲಿಂಗಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಎಸ್‌ಎನ್‌ಎಲ್ ಭಾರತ್ ನೆಟ್ ನೋಡಲ್ ಅಧಿಕಾರಿ ಹರೀಶ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

ಕರ್ನಾಟಕ ಕಂಪ್ಯೂಟರ್ ಅಕಾಡೆಮಿಯ ಮುಖ್ಯಸ್ಥರಾದ ದಿವ್ಯ ರಾಜೇಶ್ ಮತ್ತು ಸೀಮಾ ಅಕ್ಬರ್ ಕಾರ್ಯಕ್ರಮ ನಡೆಸಿಕೊಟ್ಟರು.

ಕಾಲೇಜಿನ ಉಪ ಪ್ರಾಂಶುಪಾಲರಾದ ಹರ್ಷಿತಾ, ಉಪನ್ಯಾಸಕರಾದ ಲೀಲಾಕುಮಾರಿ ತೊಡಿಕಾನ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net