ಕಾನೂನು ವಿ.ವಿ. ಕುಲಸಚಿವರಾಗಿ ಅನುರಾಧಾ ವಸ್ತ್ರದ

web 7
Published on

ಧಾರವಾಡ: ಸಮೀಪದ ನವನಗರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಕೆ.ಎ.ಎಸ್. ಅಧಿಕಾರಿ ಅನುರಾಧಾ ವಸದ ಮಂಗಳವಾರ ಡಾ. ಜಿ.ಬಿ. ಪಾಟೀಲ ಅವರಿಂದ ಅಧಿಕಾರ ಸ್ವೀಕರಿಸಿದರು.
ಅವರು ಈ ಮೊದಲು ಬೆಳಗಾವಿಯ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪರೀಕ್ಷಾರ್ಥ ತರಬೇತಿ ಅವಧಿಯಲ್ಲಿ ಧಾರವಾಡ ತಹಸೀಲ್ದಾರ್, ಅಳ್ನಾವರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹಾಗೂ ಧಾರವಾಡ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಪ್ರಾದೇಶಿಕ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಅವರ ಪತಿ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಅವರು ಇದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net