ಯಾದಗಿರಿ : ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ

Published on

ನಾಗರೀಕ ಕೇಂದ್ರಿತ ಸುಧಾರಣೆಗಳು ಯಾದಗಿರಿ ಜಿಲ್ಲೆಯಲ್ಲಿ : ಉಪ ನೋಂದಣಾಧಿಕಾರಿ

ಯಾದಗಿರಿ : 2024-25ನೇ ಸಾಲಿನ ಆಯಾವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ರ‍್ಕಾರದಿಂದ ಘೋಷಿಸಲಾಗಿರುತ್ತದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ ತುಮುಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮರ‍್ಚ್ 2024ರಲ್ಲಿ ನೋಂದಣಿ ಕಾಯ್ದೆ-1908ರ ಕಲಂ (5) ಹಾಗೂ ಕಲಂ (6) ರಡಿಯಲ್ಲಿ ಜಾರಿಗೆ ಅನುಷ್ಠಾನಗೊಳಿಸಲಾಗಿರುತ್ತದೆ. ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕರ‍್ಯ ನರ‍್ವಹಿಸುತ್ತಿದೆ. ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ಯಾದಗಿರಿ ಜಿಲ್ಲೆಯ ಎಲ್ಲಾ ಉಪನೋಂದಣಿ ಕಛೇರಿಗಳಿಗೂ ವಿಸ್ತರಿಸಲು  ನರ‍್ಧರಿಸಲಾಗಿದೆ ಎಂದು ಯಾದಗಿರಿ ಉಪ ನೋಂದಣಾಧಿಕಾರಿ ಅವರು ತಿಳಿಸಿದ್ದಾರೆ.

    ಸರ‍್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ  ಕಛೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

     ಎನಿವೇರ್ ನೋಂದಣಿ ವ್ಯವಸ್ಥೆಯು ಸರ‍್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರರ‍್ಶಕತೆಯನ್ನು ಹೆಚ್ಚಿಸುತ್ತದೆ, ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ, ಸರ‍್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಛೇರಿಯಲ್ಲಿ ದಸ್ತಾವೇಜನ್ನು ನೋಂದಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಛೇರಿ ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು, ನೋಂದಣಿ ಪ್ರಕ್ರಿಯ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ, ಉಪನೋಂದಣಿ ಕಛೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ,ಕಛೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಛೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ. ಸರ‍್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಛೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು  ನೋಂದಾಯಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net