ಅಪ್ಪಣ್ಣ ಹೆಗ್ಡೆಯವರಿಂದ ಜನಸೇವೆಯ ಸಾರ್ಥಕತೆ

poster
ಬಿ.ಅಪ್ಪಣ್ಣ ಹೆಗ್ಡೆ 90ನೇ ಜನ್ಮದಿನಾಚರಣೆಯ ಸಾರ್ವಜನಿಕ ಸಂಭ್ರಮಾಚರಣೆ ಕಾರ್ಯಕ್ರಮದ ಪೋಸ್ಟರ್ ಅನಾವರಣ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
Published on

ವಿಜಯವಾಣಿ ಸುದ್ದಿಜಾಲ ಕುಂದಾಪುರ

ಮನುಷ್ಯನ ಜನ್ಮ ಶ್ರೇಷ್ಠವೆಂದು ಪರಿಗಣಿಸುತ್ತೇವೆ. ಹೀಗಾಗಿ ಸಮಾಜಸೇವೆ ಮಾಡುವ ಮೂಲಕ ಭಗವಂತನಿಗೆ ತೆರಿಗೆ ಪಾವತಿಸುತ್ತೇವೆ. ಭಗವಂತನ ಅನುಗ್ರಹ ಸಿದ್ಧಿಸುತ್ತದೆ. ಅಪ್ಪಣ್ಣ ಹೆಗ್ಡೆ ಜನಸೇವೆಯಲ್ಲಿ ಸಾರ್ಥಕತೆ ಪಡೆದವರು ಎಂದು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ ಹೇಳಿದರು.

ಬಸ್ರೂರು ಅಪ್ಪಣ್ಣ ಹೆಗ್ಡೆ ಜನ್ಮದಿನೋತ್ಸವ ಸಮಿತಿ ಹಾಗೂ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ ವತಿಯಿಂದ ಡಿ.24ರಂದು ಬಿ.ಅಪ್ಪಣ್ಣ ಹೆಗ್ಡೆ 90ನೇ ಜನ್ಮದಿನಾಚರಣೆ ಪ್ರಯುಕ್ತ ಸಾರ್ವಜನಿಕ ಸಂಭ್ರಮಾಚರಣೆ ನಡೆಯಲಿದ್ದು, ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.

ಶಾಸಕ ಕಿರಣ್‌ಕುಮಾರ್ ಕೊಡ್ಗಿ, ಬಸ್ರೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಶುಭಹಾರೈಸಿದರು. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ, ಉದ್ಯಮಿ ಗಿಳಿಯಾರು ಉದಯ ಕುಮಾರ್ ಹೆಗ್ಡೆ, ರಾಮರತನ್ ಹೆಗ್ಡೆ ಉಪಸ್ಥಿತರಿದ್ದರು. ವಸಂತ ಗಿಳಿಯಾರು ಪ್ರಸ್ತಾವನೆಗೈದರು. ವಿಕಾಸ್ ಹೆಗ್ಡೆ ಸ್ವಾಗತಿಸಿದರು. ನರಸಿಂಹ ಪೂಜಾರಿ ವಂದಿಸಿದರು. ಪತ್ರಕರ್ತ ಕೆ.ಸಿ.ರಾಜೇಶ ಕಾರ್ಯಕ್ರಮ ನಿರೂಪಿಸಿದರು.

ಸಮಿತಿ ಸದಸ್ಯರಿಗೆ ಅಭಿನಂದನೆ

ಕೊಲ್ಲೂರು ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಬಾಬು ಶೆಟ್ಟಿ, ಸದಸ್ಯರಾದ ಸುರೇಂದ್ರ ಶೆಟ್ಟಿ, ರಘುರಾಮ ದೇವಾಡಿಗ ಆಲೂರು ಅವರನ್ನು ಅಪ್ಪಣ್ಣ ಹೆಗ್ಡೆ ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net