ಪತ್ರಿಕೋದ್ಯಮ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Published on

ಯಾದಗಿರಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ಕಚೇರಿಗಳಲ್ಲಿ ಕ್ಷೇತ್ರ ಪ್ರಚಾರ ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿನ ಕಾರ್ಯನಿರ್ವಹಣೆ ಕುರಿತು ಒಂದು ವರ್ಷಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿಯ ಹಿರಿಯ ಸಹಾಯಕ ನಿರ್ದೇಶಕ ಸುಲೈಮಾನ್ ಡಿ. ನದಾಫ್ ತಿಳಿಸಿದ್ದಾರೆ.

ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಯನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಅಭ್ಯರ್ಥಿಗೆ ಮಾಹೆಯಾನ 15,000 ರೂ.ಗಳ ಸ್ಟೆöÊಫಂಡ್ ನೀಡಲಾಗುವುದು.

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದAದು ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಈಗಾಗಲೇ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಇದೇ ರೀತಿಯ ಅಪ್ರೆಂಟಿಸ್ ತರಬೇತಿ ಪಡೆದವರು ಮತ್ತು ಅಂಕಪಟ್ಟಿ ನಿರೀಕ್ಷಿಸಿ ಅರ್ಜಿಸಲ್ಲಿಸುವಂತಿಲ್ಲ. ಸುಳ್ಳು ಮಾಹಿತಿ ನೀಡಿ ಅರ್ಜಿಸಲ್ಲಿಸಿದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದಮ್ಮೆ ಹೂಡಲಾಗುವುದು.

ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ 'ಬಿ' ಬ್ಲಾಕ್, ಯಾದಗಿರಿ 585202 ಇವರಿಂದ ಪಡೆದು ಭರ್ತಿ ಮಾಡಿ ಅದರೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ.ಅಂಕಪಟ್ಟಿ, ಪತ್ರಿಕೋದ್ಯಮ ಪದವಿ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ಲಗತ್ತಿಸಿ ಇದೇ ಕಚೇರಿಗೆ 2024ರ ನವೆಂಬರ್ 20ರ ಒಳಗೆ ಅರ್ಜಿಸಲ್ಲಿಸಬೇಕು. ತದನಂತರ ಬರುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತ ಭವನ, ಬಿ.ಬ್ಲಾಕ್, 1ನೇ ಮಹಡಿ, ಯಾದಗಿರಿ 585 202 ದೂ.ಸಂ.08473 253722,ಇ-ಮೇಲ್  varthabhavanyadagiri@gmail.com  ಹಿರಿಯ ಸಹಾಯಕ ನಿರ್ದೇಶಕರು ಸುಲೈಮಾನ್.ಡಿ.ನದಾಫ್ ಮೊ.ನಂ.9449926128, ಸ್ವಾಗತಕರ ಹಾಗೂ ಗ್ರಂಥಪಾಲಕರು ರವಿ.ಎ.ಮಿರಸ್ಕರ್ ಮೊ.ನಂ.9900226126, ದತ್ತಾಂಶ ನಮೂದು ಸಹಾಯಕ (ಬೆರಳಚ್ಚುಗಾರರು) ಭೀಮಣ್ಣ ನಾಯಕ ಮೊ.ನಂ.9980135288, ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net