ರೈತರಿಂದಲೇ ಬೆಳೆ ಸಮೀಕ್ಷಾ ಕಾರ್ಯ

KRASHI
Published on

ಯಾದಗಿರಿ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭಗೊಂಡಿದ್ದು, ಇದರಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ಇಲ್ಲಿನ ಜಿಪಂ ಕಚೇರಿಯಲ್ಲಿ ಗುರುವಾರ ಬೆಂಗಳೂರಿನಿಂದ ವಿಡಿಯೋ ಕಾನ್ಫರೆರ್ನ್​ ಮೂಲಕ ಮಾತನಾಡಿ, ಆಗಷ್ಟ್ 13 ರಿಂದ 24ರ ವರೆಗೆ ಯಾದಗಿರಿ ತಾಲೂಕಿನಾದ್ಯಂತ ಆರಂಭವಾಗುತ್ತಿದೆ, ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ನಿದರ್ೇಶನ ನೀಡಿದರು.

ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಬಳಕೆಯಿಂದ ರೈತರಿಗಾಗುವ ಉಪಯೋಗದ ಮಾಹಿತಿ ಒಳಗೊಂಡ ಬಿತ್ತಿ ಪತ್ರ ಬಿಡುಗಡೆ ಮಾಡಿ, ಮೊಬೈಲ್ ಆಪ್ನ್ನು ಗೂಗಲ್ ಪ್ಲೇ-ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಬಳಕೆ ಮಾಡುವ ರೀತಿ ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗುತ್ತಿದೆ ಎಂದರು.

ತಮ್ಮ ಜಮೀನಿನಲ್ಲಿರುವ ಬಹುವಾಷರ್ಿಕ ತೋಟಗಾರಿಕೆ, ಅರಣ್ಯ, ಇತರೆ ಬೆಳೆಗಳ ಮಾಹಿತಿ ಛಾಯಾಚಿತ್ರ ಸಹಿತ ರೈತರು ತಮ್ಮ ಆಂಡ್ರಾಡ್ ಮೊಬೈಲ್ ಗೂಗಲ್ ಪ್ಲೇಸ್ಟೋರ್ನಲ್ಲಿ ಬೆಳೆ ಸಮೀಕ್ಷೆ 2020 ಆ್ಯಪ್ನ್ನು ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ಸ್ವತಃ ತಾವೇ ಬೆಳೆ ಸಮೀಕ್ಷೆ ಮೂಲಕ ನಮೂದಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣವನ್ನು ಲೆಕ್ಕ ಹಾಕುವ ಕಾರ್ಯದಲ್ಲಿ, ಬೆಳೆ ವಿಮೆ ಯೋಜನೆಯ ಸವರ್ೆ ನಂಬರ್ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಆರ್ಟಿಸಿಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಎನ್ಡಿಆರ್ಎಫ್ ಮತ್ತು ಎಸ್ಟಿಆರ್ಎಫ್ನಡಿ ಸಹಾಯಧನ ನೀಡಲು, ಅಲ್ಲದೆ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ ಸಿದ್ಧಪಡಿಸುವಲ್ಲಿ ಅನುಕೂಲವಾಗಲಿದೆ ಎಂದರು.

ಹಾನಿಗೊಳಗಾದ ಬೆಳೆ ವಿಸ್ತೀರ್ಣದ ಮಾಹಿತಿ ಸಿದ್ಧಪಡಿಸುವಲ್ಲಿ ಮತ್ತು ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭಗಳಲ್ಲಿ ಬೆಳೆ ಸಮೀಕ್ಷೆ ಮಾಹಿತಿ ಆಧಾರವಾಗಿಟ್ಟುಕೊಂಡು ಸಿದ್ಧಪಡಿಸುವುದರಿಂದ ರೈತರು ತಪ್ಪದೆ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ ಇತರೆ ಬೆಳೆಗಳ ವಿವರವನ್ನ ರೈತರ ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಮಾಹಿತಿ ನೀಡಿದರು.

ಪ್ರೋಬೆಷನರಿ ಐಎಎಸ್ ಅಧಿಕಾರಿ ಅಶ್ವಿಜಾ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪುತ್, ಜಿಪಂ ಉಪ ಕಾರ್ಯದಶರ್ಿ ಮುಕ್ಕಣ್ಣ ಕರಿಗಾರ, ತಾಂತ್ರಿಕ ಜಂಟಿ ಕೃಷಿ ನಿದರ್ೇಶಕ ರಾಜಕುಮಾರ, ಪ್ರಭಾರಿ ಉಪ ಕೃಷಿ ನಿದರ್ೇಶಕಿ ರೂಪಾ, ಕೆವಿಕೆ ಮಖ್ಯಸ್ಥ ಡಾ.ಅಮರೇಶ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net