

ವಿಜಯವಾಣಿ ಸುದ್ದಿಜಾಲ ಧಾರವಾಡ
ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಜು. 21ರಂದು ಆಚರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಗೀತಾ ಸಿ.ಡಿ. ಮಾತನಾಡಿ, ಜು. 21ರಂದು ಬೆಳಗ್ಗೆ 11 ಗಂಟೆಗೆ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಿಸಲಾಗುವುದು. ಜಯಂತಿ ಕಾರ್ಯಕ್ರಮವನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಭಾಭವನದಲ್ಲಿ ಆಚರಿಸಲು ನಿರ್ಧರಿಸಿದ್ದು, ವಿಶೇಷ ಉಪನ್ಯಾಸ ಸಹ ಏರ್ಪಡಿಸಲಾಗುವುದು ಎಂದರು.
ಸಮಾಜದ ಮುಖಂಡರು ಭಾಗವಹಿಸಿ ಸಲಹೆ, ಸೂಚನೆ ನೀಡಿದರು. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು.