

ಹುನಗುಂದ: ಪ್ರವಾದಿ ಮೊಹಮ್ಮದ್ ಪೈಗಂಬರ್ ಹಾಗೂ ಇಸ್ಲಾಂ ಧರ್ಮದ ಕುರಿತು ರಾಮಗಿರಿ ಮಹಾರಾಜರ ವಿವಾದಾತ್ಮಕ ಹೇಳಿಕೆ ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಅಂಜುಮನ್ ಇಸ್ಲಾಂ ಸಮಿತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ ಗ್ರೇಡ್-2 ತಹಸೀಲ್ದಾರ್ ಮಹೇಶ ಸಂದಿಗವಾಡಗೆ ಮನವಿ ಸಲ್ಲಿಸಲಾಯಿತು.
ಮುಸ್ಲಿಂ ಸಮಾಜದ ಮುಖಂಡರಾದ ಜಬ್ಬಾರ್ ಕಲಬುರ್ಗಿ ಮಾತನಾಡಿ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಸಿನ್ನಾರ ತಾಲೂಕಿನ ಶಾ ಪಾಂಚಾಲೆ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಮಗಿರಿ ಮಹಾರಾಜರು ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹೇಳಿಕೆಗಳು ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ, ಕೋಮು ಸೌಹಾರ್ದಕ್ಕೆ ಧಕ್ಕೆ ತಂದಿದೆ. ಕೂಡಲೇ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಮೌಲಾನ ಆಸ್ಿ ದಿಢೀಮನಿ, ಮುಫ್ತಿ ರ್ಇಾನ್ ವೆಂಕಟಪುರ, ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷ ಪರ್ವೀಜ್ ಖಾಜಿ, ಮುಸ್ಲಿಂ ಸಮಾಜದ ಮುಖಂಡರಾದ ಮಹೆಬೂಬ್ ಸರಕಾವಸ, ಮೊಹಮ್ಮದ್ ಆಸ್ಿ ಕಲಬುರ್ಗಿ, ರಜಾಕ್ ರೇಷ್ಮಿ, ಇಸ್ಮಾಯಿಲ್ ನಾಯಕ, ಮೈನು ಧನ್ನೂರ, ಜಾಕೀರ್ ಇದ್ದಲಗಿ, ಅಬೂಬಕರ ಪೀರಜಾದೆ ಇತರರಿದ್ದರು.