ಸಮರ್ಪಕ ಕುಡಿಯುವ ನೀರು ಸರಬರಾಜಿಗೆ ಒತ್ತಾಯಿಸಿ ಮನವಿ

ಚಿತ್ರ 21ಎಸ್ ಡಿ ಪಿ 01.
ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷದ ಗೂಡುಗದ್ದೆ ಶಾಖೆಯ ವತಿಯಿಂದ ಕುಡಿಯುವ ನೀರಿಗೆ ವೈಜ್ಞಾನಿಕವಾದ ಶಾಶ್ವತ ಪರಿಹಾರ ಕಂಡುಕೊಳ್ಳುವ ಮೂಲಕ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಮಂಗಳವಾರ ಸಿದ್ದಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಳನಿ ಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.
Published on

ಸಿದ್ದಾಪುರ: ಕಾರ್ಮಿಕರು ಹೆಚ್ಚಾಗಿ ವಾಸವಿರುವ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೂಡುಗದ್ದೆ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು ಸಮರ್ಪಕ ನೀರು ಸರಬರಾಜು ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಮಂಗಳವಾರ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ ಗೂಡುಗದ್ದೆ ಶಾಖೆಯ ವತಿಯಿಂದ ಕುಡಿಯುವ ನೀರಿಗೆ ವೈಜ್ಞಾನಿಕವಾದ ಶಾಶ್ವತ ಪರಿಹಾರ ಕಂಡುಕೊಳ್ಳುವ ಮೂಲಕ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಸಿದ್ದಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಳನಿ ಸ್ವಾಮಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಪಕ್ಷದ ಮುಖಂಡ ಮುಸ್ತಫ ಮಾತನಾಡಿ, ಬಡ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸಿಸುತ್ತಿರುವ ಈ ಪ್ರದೇಶದಲ್ಲಿ ನಿಗದಿತ ಸಮಯದಲ್ಲಿ ಸಮರ್ಪಕವಾದ ರೀತಿಯಲ್ಲಿ ಕುಡಿಯುವ ನೀರಿನ ಸರಬರಾಜು ಆಗುತ್ತಿಲ್ಲ ಎಂದು ಹೇಳಿದ ಅವರು, ಸಮಸ್ಯೆ ಪರಿಹರಿಸಲು ಒಂದಕ್ಕಿಂತ ಹೆಚ್ಚು ಕೊಳವೆ ಬಾವಿಯನ್ನು ನಿರ್ಮಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಇಲ್ಲದಿದ್ದಲ್ಲಿ ಮುಂದಿನ 15 ದಿನದೊಳಗೆ ಗ್ರಾಮ ಪಂಚಾಯತಿ ಸಮಸ್ಯೆ ಪರಿಹಾರಕ್ಕೆ ಮುಂದಾಗದಿದ್ದಲ್ಲಿ ಗ್ರಾಮಸ್ಥರು, ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪಕ್ಷದ ನೇತೃತ್ವದಲ್ಲಿ ಹೋರಾಟಕ್ಕೆ ಮುಂದಾಗುಗುವುದಾಗಿ ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net