ಚೆಲ್ಯಡ್ಕ ಸೇತುವೆಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಿ: ಒಳಮೊಗ್ರು ಬಿಜೆಪಿ ಮುಖಂಡರಿಂದ ಎಸಿಗೆ ಮನವಿ

bridge
ಚೆಲ್ಯಡ್ಕ ಸೇತುವೆಯ ಮೇಲೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿ ಒಳಮೊಗ್ರು ವ್ಯಾಪ್ತಿಯ ಬಿಜೆಪಿ ಪ್ರಮುಖರು ಮಂಗಳವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು. ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್‌ಕುಮಾರ್ ಶಾಂತಿವನ ಮತ್ತಿತರರು ಇದ್ದರು.
Published on

ಪುತ್ತೂರು ಗ್ರಾಮಾಂತರ: ಪುತ್ತೂರು-ಪರ್ಲಡ್ಕ-ಕುಂಜೂರುಪಂಜ-ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆಯ ಮೇಲೆ ಭಾರಿ ವಾಹನಗಳ ಸಂಚಾರ ನಿಷೇಧಿಸಿರುವುದರಿಂದ ಬಸ್ ಸಂಚಾರವಿಲ್ಲದೆ ಆ ಭಾಗದ ವಿದ್ಯಾರ್ಥಿಗಳಿಗೆ ಮತ್ತು ಕೂಲಿ ಕಾರ್ಮಿಕರಿಗೆ ಸಮಸ್ಯೆಯಾಗಿದು, ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿ ಒಳಮೊಗ್ರು ವ್ಯಾಪ್ತಿಯ ಬಿಜೆಪಿ ಪ್ರಮುಖರು ಮಂಗಳವಾರ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಬಿಜೆಪಿ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್‌ಕುಮಾರ್ ಶಾಂತಿವನ, ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಸದಸ್ಯರಾದ ಮಹೇಶ್ ರೈ ಕೇರಿ, ಪ್ರದೀಪ್, ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ರಾಜೇಶ್ ರೈ ಪರ್ಪುಂಜ, ಒಳಮೊಗ್ರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಉಪವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಸೇತುವೆ ಮೇಲೆ ಅಧಿಕ ಭಾರದ ಸರಕು ಸಾಗಾಣಿಕೆಯ ವಾಹನಗಳ ಓಡಾಟ ನಿಷೇಧ ಮಾಡಿರುವುದನ್ನು ಬೇಕಾದಲ್ಲಿ ಮುಂದುವರಿಸಿ. ಆದರೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಿ. ಬಸ್‌ಗಳ ಓಡಾಟ ಸಾಧ್ಯವಾಗದಿದ್ದರೆ ಪರ್ಯಾಯ ವ್ಯವಸ್ಥೆಯಾಗಿ ಕೆಎಸ್ಸಾರ್ಟಿಸಿಯಿಂದ ಪುತ್ತೂರಿನಿಂದ ಗುಮ್ಮಟಗದ್ದೆ, ಚೆಲ್ಯಡ್ಕದಿಂದ ಪಾಣಾಜೆ, ಗುಮ್ಮಟಗದ್ದೆಯಿಂದ ಪುತ್ತೂರು, ಪಾಣಾಜೆಯಿಂದ ಚೆಲ್ಯಡ್ಕವಾಗಿ 4 ಬಸ್ಸುಗಳ ತಾತ್ಕಾಲಿಕ ಸಂಚಾರಕ್ಕೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೇಳಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net