ಕೋವಿಡ್-೧೯ ಲಸಿಕೆ ಸದುಪಯೋಗಕ್ಕೆ ಮನವಿ

Venkatesh DHO
Published on

ಮಡಿಕೇರಿ: ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಮಾತ್ರ ಲಭ್ಯವಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಮನವಿ ಮಾಡಿದ್ದಾರೆ.


ಭಾರತ ಸರ್ಕಾರ ೧೮ ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಉಚಿತವಾಗಿ ಮುಂಜಾಗ್ರತಾ ಕೋವ್ಯಾಕ್ಸಿನ್ ಲಸಿಕೆ ಹಾಗೂ ೧೫ ವರ್ಷ ಮೇಲ್ಪಟ್ಟವರಿಗೆ ಎರಡನೇ ವರಸೆಯ ಕೋವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುತ್ತಿದೆ. ಆದ್ದರಿಂದ ಕೊಡಗು ಜಿಲ್ಲೆಯಲ್ಲಿಯೂ ಕೂಡ ಎಲ್ಲಾ ಆರೋಗ್ಯ ಕೇಂದ್ರಗಳ ಲಸಿಕಾ ವಿಭಾಗದಲ್ಲಿ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.


ಜಿಲ್ಲೆಯಲ್ಲಿ ಎರಡನೇ ವರಸೆಗೆ ಬಾಕಿ ಇರುವ ೧೫ ವರ್ಷ ಮೇಲ್ಪಟ್ಟ ಒಟ್ಟು ೮೫೮ ಫಲಾನುಭವಿಗಳು ಹಾಗೂ ಎರಡನೇ ವರಸೆಯ ಕೋವ್ಯಾಕ್ಸಿನ್ ಲಸಿಕೆಯನ್ನು ಪಡೆದು ೬ ತಿಂಗಳು ಪೂರೈಸಿರುವ ೧೮ ವರ್ಷ ಮೇಲ್ಪಟ್ಟ ಒಟ್ಟು ೪೨,೨೧೪ ಫಲಾನುಭವಿಗಳು ಮುಂಜಾಗ್ರತಾ ಕೋವಿಡ್ ಲಸಿಕಾಕರಣಕ್ಕೆ ಬಾಕಿ ಇದ್ದಾರೆ. ಈ ಎಲ್ಲಾ ಅರ್ಹ ಫಲಾನುಭವಿಗಳು ತಮ್ಮ ಸಮೀಪದ ಆರೋಗ್ಯ ಕೇಂದ್ರದಲ್ಲಿ ಪ್ರತಿ ದಿನ ನಡೆಯುವ ಲಸಿಕಾ ಶಿಬಿರದಲ್ಲಿ ಕೋವ್ಯಾಕ್ಸಿನ್ ಲಸಿಕೆ ಹಾಕಿಸಿ ಸದುಪಯೋಗ ಪಡೆದುಕೊಳ್ಳಲು ಡಾ.ಆರ್.ವೆಂಕಟೇಶ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net