ರಾಷ್ಟ್ರೀಯ ರಜಾ ದಿನ ಘೋಷಣೆಗೆ ಮನವಿ

Untitled
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನೇತಾಜಿ ಸುಭಾಸಚಂದ್ರ ಭೋಸ ಜನ್ಮದಿನವನ್ನು ರಾಷ್ಟ್ರೀಯ ರಜಾ ದಿನವಾಗಿ ಘೋಷಿಸುವಂತೆ ಭಾರತ ಏಕತಾ ಆಂದೋಲನ ಕಾರ್ಯಾಧ್ಯಕ್ಷ ಮಹಾದೇವ ಹೊರಟ್ಟಿ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ಭಾರತ ಮಾತೆಯ ಧೀರ ಪುತ್ರ ಸುಭಾಸಚಂದ್ರ ಜನ್ಮದಿನ ಜ. 23ರಂದು ಇದ್ದು, ಈ ದಿನವನ್ನು ರಾಷ್ಟ್ರೀಯ ರಜಾ ದಿನವಾಗಿ ಘೋಷಿಸಬೇಕಲ್ಲದೆ, ದೇಶದ ಯುವ ಜನರಲ್ಲಿ ರಾಷ್ಟ್ರ ಪ್ರೇಮ ಬೆಳೆಸುವ ನಿಟ್ಟಿನಲ್ಲಿ ಪ್ರತಿ ರಾಜ್ಯಗಳಲ್ಲಿ ನೇತಾಜಿ ಸುಭಾಸ ಭವನಗಳನ್ನು ನಿರ್ಮಿಸಬೇಕು ಎಂದು ಮನವಿ ಮಾಡಿದ್ದಾರೆ.

ನೇತಾಜಿ ಅವರ ಭಾವಚಿತ್ರಗಳನ್ನು ಸರ್ಕಾರಿ ಕಚೇರಿ, ಶಾಲೆ-ಕಾಲೇಜುಗಳಲ್ಲಿ ಅಳವಡಿಸಬೇಕು. ಇಂದಿನ ದಿನಗಳಲ್ಲಿ ನೇತಾಜಿ ಅವರ ತ್ಯಾಗ ಮತ್ತು ಆದರ್ಶಗಳನ್ನು ಯುವಜನರ ಹೃದಯಗಳಲ್ಲಿ ಬಿತ್ತುವುದು ಎಲ್ಲರ ಕರ್ತವ್ಯವಾಗಿದೆ. ಹೀಗಾಗಿ ದೇಶದ ಒಳಿತಿಗಾಗಿ ನಮ್ಮ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸಬೇಕು ಎಂದು ಮಹಾದೇವ ಹೊರಟ್ಟಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net