ಜಿಲ್ಲಾ ಯುವ ಕೊರಮ ಕ್ಷೇಮಾಭಿವೃದ್ಧಿ ಸಂದ ಮನವಿ

Appeal for District Youth Koram Welfare Development
Published on

ವಿಜಯಪುರ: ನಗರದ ಶ್ರೀ ಸಿದ್ಧೇಶ್ವರ ಬ್ಯಾಂಕಿಗೆ ಅ.12 ರಂದು ನಡೆಯಲಿರುವ ನಿರ್ದೇಶಕರ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಸ್ಥಾನಕ್ಕೆ ಹಿಂದುಳಿದ ವರ್ಗದ ಅಭ್ಯರ್ಥಿ ಸ್ಪರ್ಧೆ ತಡೆಹಿಡಿಯುವಂತೆ ಒತ್ತಾಯಿಸಿ ಜಿಲ್ಲಾ ಯುವ ಕೊರಮ ೇಮಾಭಿವೃದ್ಧಿ ಸಂದ ವತಿಯಿಂದ ಇತ್ತೀಚೆಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಂದ ಅಧ್ಯಕ್ಷ ರವೀಂದ್ರ ಜಾಧವ ಮಾತನಾಡಿ, ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಸ್ಥಾನಕ್ಕೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಮೀಸಲಿರುವಂತ ಒಂದು ನಿರ್ದೇಶಕ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರದ ಅಭ್ಯರ್ಥಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುತ್ತಿದ್ದು. ಈ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ. ಒಂದು ವೇಳೆ ಈ ಅಭ್ಯರ್ಥಿ ಚುನಾವಣಾ ಕಣದಲ್ಲಿದ್ದರೆ ಅಂಥವರ ಜಾತಿ ಮತ್ತು ಜಾತಿ ಪ್ರಮಾಣ ಪತ್ರವನ್ನು ಕೂಲಂಕಶವಾಗಿ ಪರೀಸಿ ಅವರನ್ನು ಅನರ್ಹಗೊಳಿಸಬೇಕು. ಅಲ್ಲದೆ, ಪರಿಶಿಷ್ಟ ಜಾತಿ ಜನಾಂಗಕ್ಕೆ ದ್ರೋಹ ಮತ್ತು ದೌರ್ಜನ್ಯ ಎಸಗುವ ಕಾಯ್ದೆ ಅಡಿಯಲ್ಲಿ ಅಂಥವರ ಮೇಲೆ ಪ್ರಕರಣ ದಾಖಲಿಸಿ ತಕ್ಷಣ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸಿದ್ಧೇಶ್ವರ ಬ್ಯಾಂಕಿನ ನಿರ್ದೇಶಕ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಹಿಂದುಳಿದ ವರ್ಗದ ಅಭ್ಯರ್ಥಿಯ ಸ್ಪರ್ಧೆಯನ್ನು ತಡೆಹಿಡಿಯವುಂತೆ ಒತ್ತಾಯಿಸಿ ವಿಜಯಪುರದಲ್ಲಿ ಜಿಲ್ಲಾ ಯುವ ಕೊರಮ ಕ್ಷೇಮಾಭಿವೃದ್ಧಿ  ಸಂದಿಂದ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮನವಿ ಸಲ್ಲಿಸಲಾಯಿತು. ರವೀಂದ್ರ ಜಾಧವ ಮತ್ತಿತರರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net