

ವಿಜಯವಾಣಿ ಸುದ್ದಿಜಾಲ ಹೆಬ್ರಿ
ಹೆಬ್ರಿ ತಾಲೂಕಿನ ಸರ್ಕಾರಿ ಬಸ್ ನಿಲ್ದಾಣ ಕಾಮಗಾರಿ ಕುಂಠಿತವಾಗಿದ್ದು ಶೀಘ್ರವಾಗಿ ಪೂರ್ಣಗೊಳಿಸುವಂತೆ ಹೆಬ್ರಿ ತಹಸೀಲ್ದಾರ್‌ಗೆ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್‌ಕುಚ್ಚೂರು ಮನವಿ ಸಲ್ಲಿಸಿದರು.
ಬಸ್ ನಿಲ್ದಾಣ ಕಾಮಗಾರಿ ಆರಂಭಗೊಂಡು ಮೂರು ವರ್ಷವಾದರೂ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಪ್ರಸ್ತುತ ಬಸ್ ನಿಲ್ದಾಣ ಪೇಟೆಯಲ್ಲಿರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಮುತುವರ್ಜಿವಹಿಸಿ ಆದಷ್ಟು ಶೀಘ್ರವಾಗಿ ಬಸ್ ನಿಲ್ದಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಮಾಡಲಾಯಿತು.