ಅನುದಾನ ರಹಿತ ಆಡಳಿತ ಮಂಡಳಿಗಳಿ೦ದ ಮನವಿ

5 Dwd 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಬೋಧಕ, ಬೋಧಕೇತರ ಸಿಬ್ಬಂದಿಗೆ ಕನಿಷ್ಠ ವೇತನ, ಸೇವಾ ಭದ್ರತೆ ಹಾಗೂ ಇತರ ಸೌಲಭ್ಯ ಕಲ್ಪಿಸುವಂತೆ ಶಿಕ್ಷಣ ಇಲಾಖೆಯ ಅಽಕಾರಿಗಳು ಅನುದಾನ ರಹಿತ ಆಡಳಿತ ಮಂಡಳಿಗಳಿಗೆ ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಅನುದಾನ ರಹಿತ ಆಡಳಿತ ಮಂಡಳಿಗಳ ಸಂಘದಿAದ ಜಿಲ್ಲಾಽಕಾರಿ ದಿವ್ಯ ಪ್ರಭು ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಕನಿಷ್ಠ ವೇತನ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಆದಾಗ್ಯೂ ಶಿಕ್ಷಣ ಇಲಾಖೆ ಅಽಕಾರಿಗಳು ಸಿಬ್ಬಂದಿಗೆ ಕಲ್ಪಿಸಿರುವ ವೇತನ ಕುರಿತು ಮೇಲಿಂದ ಮೇಲೆ ಮಾಹಿತಿ ಕೇಳುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದರು.
ಅಽಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ಜಿಲ್ಲಾಽಕಾರಿ ತಿಳಿಸಿದರು.
ಸಂಘದ ಜಿಲ್ಲಾ ಅಧ್ಯಕ್ಷ ಜಯಪ್ರಕಾಶ ಟೆಂಗಿನಕಾಯಿ, ಪದಾಽಕಾರಿಗಳಾದ ಮಹೇಂದ್ರ ಸಿಂಘಿ, ಪ್ರೊ. ಎಸ್.ಕೆ. ಆದೆಪ್ಪನವರ, ಶಂಕರ ಹಲಗತ್ತಿ, ಮಹಾವೀರ ಉಪಾಧ್ಯಾಯ, ಎಂ.ಕೆ. ಬಾಬಜಿ, ವಿಶ್ವನಾಥ ರಾನಡೆ, ಈಶ್ವರಲಾಲ ಲದ್ದಡ, ಜೆ.ಕೆ. ಶೆಟ್ಟಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net