ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಶಿಕ್ಷಕರ ಮನವಿ

5spt4
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರಪೇಟೆ ತಾಲೂಕು ಶಿಕ್ಷಕರ ಸಂಘದ ವತಿಯಿಂದ ತಹಸೀಲ್ದಾರ್ ನವೀನ್‌ಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಮಂಜುನಾಥ್, ಕರುಂಬಯ್ಯ, ಯೋಗೇಶ್, ಬಸವರಾಜ್ ಇದ್ದರು.
Published on

ಸೋಮವಾರಪೇಟೆ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಹಸೀಲ್ದಾರ್ ನವೀನ್‌ಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳಿಂದ 2016ಕ್ಕಿಂತ ಮೊದಲು ನೇಮಕವಾದ ಶಿಕ್ಷಕರಿಗೆ ಬಡ್ತಿ, ವರ್ಗಾವಣೆ ಮೊದಲಾದವುಗಳಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸರಿಪಡಿಸಿಸುವುದು. ಆರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಿಂದಿನಂತೆ ಪೌಢಶಾಲೆಗಳಿಗೆ ಬಡ್ತಿ ನೀಡುವುದು, ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯಶಿಕ್ಷಕರ ಹುದ್ದೆಗಳಿಗೆ ಸೇವಾ ಜೇಷ್ಠತೆ ಆಧಾರದ ಮೇಲೆ ಬಡ್ತಿ ನೀಡುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎನ್.ಮಂಜುನಾಥ, ಉಪಾಧ್ಯಕ್ಷ ಕರುಂಬಯ್ಯ, ರಾಜ್ಯ ನಾಮನಿರ್ದೇಶಿತ ಉಪಾಧ್ಯಕ್ಷ ಎಸ್.ಎ.ಯೋಗೇಶ್. ತಾಲೂಕು ಘಟಕದ ಅಧ್ಯಕ್ಷ ಟಿ.ಕೆ.ಬಸವರಾಜು, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಂ. ನಾಗೇಶ್ ಸೇರಿದಂತೆ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net