ಪಾಲಿಟೆಕ್ನಿಕ್, ನರ್ಸಿಂಗ್ ಕಾಲೇಜಿಗೆ ಮನವಿ

Published on

ಬಳ್ಳಾರಿ : ಪಟ್ಟಣದಲ್ಲಿ ನರ್ಸಿಂಗ್ ಕಾಲೇಜು ಹಾಗೂ ತಾಲೂಕಿನ ತೋರಣಗಲ್‌ನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಮಂಜೂರು ಮಾಡುವಂತೆ ಶಾಸಕಿ ಈ.ಅನ್ನಪೂರ್ಣ ಮನವಿ ಮಾಡಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದ ಅಧಿವೇಶನದಲ್ಲಿ ಬುಧವಾರ ವಿಧಾನಸಭೆ ಕಲಾಪದಲ್ಲಿ ಭಾಗವಹಿಸಿ ಮಾತನಾಡಿದರು.

ಸಂಡೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಯಿಂದ 200 ಹಾಸಿಗೆಯ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿದ್ದಕ್ಕೆ ಸರ್ಕಾರ ಅನುಕೂಲ ಮಾಡಿದೆ. ಆದರೆ, ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರು, ಪ್ರಸೂತಿ ತಜ್ಞರು ಮುಂತಾದ ತಜ್ಞ ವೈದ್ಯರ ಕೊರತೆ ನೀಗಿಸಬೇಕು ಎಂದು ಕೋರಿದರು. ಕ್ಷೇತ್ರದಲ್ಲಿ ಗಣಿಗಾರಿಕೆ, ಉಕ್ಕು, ಪೇಂಟ್ ಹೀಗೆ ಹಲವು ಕಾರ್ಖಾನೆ, ಉದ್ದಿಮೆಗಳಿವೆ. ಕ್ಷೇತ್ರದ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಆರೋಗ್ಯ ವೃದ್ಧಿಗೆ ಮನವಿ ಮಾಡಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net