ನಿವೇಶನಕ್ಕೆ ಒತ್ತಾಯಿಸಿ ಡಿಸಿಗೆ ಮನವಿ

17 ckm 4
ಚಿಕ್ಕಮಗಳೂರು ಡಿಸಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದ ಜಿ. ಹೊಸಹಳ್ಳಿಯ ತಮಟೇಬೈಲು ಕಾಲನಿ ಗ್ರಾಮಸ್ಥರು ತಮಗೆ ನಿವೇಶನ ಮಂಜೂರು ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಡಿಎಸ್‌ಎಸ್ ಮುಖಂಡರಾದ ಮರ್ಲೆ ಅಣ್ಣಯ್ಯ, ಸಂತೋಷ್, ಆಶಾ, ಯಮುನ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ನಿವೇಶನ ರಹಿತರಿಗೆ ನಿವೇಶನ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಜಿ. ಹೊಸಹಳ್ಳಿಯ ತಮಟೇಬೈಲು ಕಾಲನಿ ಗ್ರಾಮಸ್ಥರು ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಬುಧವಾರ ಜಿಲ್ಲಾ ಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಡಿಎಸ್‌ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಜಿ.ಹೊಸಳ್ಳಿಯ ತಮಟೇಬೈಲು ಕಾಲನಿಯ ನಿವಾಸಿಗಳು ಆರು ದಶಕಗಳಿಂದ ವಾಸಿಸುತ್ತಿದ್ದಾರೆ. ಅವರಿಗೆ ನಿವೇಶನ ಒದಗಿಸುವ ಮೂಲಕ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.
ಹಲವಾರು ವರ್ಷಗಳಿಂದ ನಿವೇಶನ ರಹಿತರ ಸಮಸ್ಯೆಗಳಿಗೆ ಸ್ಪಂದಿಸುವAತೆ ಹೋರಾಟ ರೂಪಿಸುತ್ತಾ ಬಂದಿದ್ದರೂ ತಾಲೂಕು ಹಾಗೂ ಜಿಲ್ಲಾಡಳಿತ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇತ್ತೀಚೆಗೆ ಸರ್ವೇ ನಂ.೧೮೨ ರಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವಾಗ ಅರಣ್ಯ ಇಲಾಖೆ ಅಧಿಕಾರಿಗಳು, ಪಿಡಿಒ ಹಾಗೂ ರಾಜಸ್ವ ನಿರೀಕ್ಷಕರು ಸ್ಥಳಕ್ಕಾಗಮಿಸಿ ಅಹವಾಲುಗಳನ್ನು ಸ್ವೀಕರಿಸಿ ನಿವೇಶನ ಒದಗಿಸುವುದಾಗಿ ಭರವಸೆ ನೀಡಿದರು.
ಹೀಗಾಗಿ ನಿವೇಶನ ರಹಿತರು ಭೂಮಿಗಾಗಿ ಒತ್ತಾಯಿಸಿ ಮತದಾನ ಬಹಿಷ್ಕಾರ ನಿರ್ಧರಿಸಿದ್ದರು. ಆದರೆ ಅಧಿಕಾರಿಗಳ ಭರವಸೆ ಮೇರೆಗೆ ನಿರ್ಧಾರವನ್ನು ಕೈಬಿಡಲಾಗಿದೆ. ಹೀಗಾಗಿ ಜಿಲ್ಲಾಡಳಿತ ನೊಂದ ಕುಟುಂಬಗಳಿಗೆ ನಿವೇಶನವನ್ನು ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಡಿಎಸ್‌ಎಸ್ ಮೂಡಿಗೆರೆ ಸಂಚಾಲಕ ಸಂತೋಷ್, ಜಿಲ್ಲಾ ಮಹಿಳಾ ಸಂಚಾಲಕಿ ಆಶಾ, ತಾಲೂಕು ಸಂಚಾಲಕಿ ಯಮುನ, ಗ್ರಾಮಸ್ಥರಾದ ಪ್ರಮೀಳಾ, ಕಮಲಾ, ರಮೇಶ್, ಸುಂದರಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net