ಬೆಳ್ತಂಗಡಿ ಹೊಸ ನ್ಯಾಯಾಲಯ ಕಟ್ಟಡಕ್ಕಾಗಿ ಸಚಿವಗೆ ಮನವಿ

New Project (29)
Published on

ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ಶಿಥಿಲವಾಗಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.

ಹೈಕೋರ್ಟ್ ವಕೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಹಿರಿಯ ವಕೀಲರ ಸಮಿತಿಯ ಅಧ್ಯಕ್ಷ ಅಲೋಶಿಯಸ್ ಎಸ್.ಲೋಬೊ, ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ, ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ, ಹಿರಿಯ ವಕೀಲರಾದ ಬಿ.ಎಂ.ಭಟ್ ಮತ್ತು ಶ್ರೀನಿವಾಸ ಗೌಡ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net