ಅನುದಾನ ಮಂಜೂರಾತಿಗೆ ಸಂಸದರಿಗೆ ಮನವಿ

New Project (10)
Published on

ಪುತ್ತೂರು ಗ್ರಾಮಾಂತರ: ಒಳಮೊಗ್ರು ಗ್ರಾಪಂ ಕಚೇರಿಯ ಕಟ್ಟಡದ ಮೇಲಂಸ್ತಿನಲ್ಲಿ ಸಭಾಂಗಣ, ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಡುವಂತೆ ಆಗ್ರಹಿಸಿ ಬಿಜೆಪಿ ಒಳಮೊಗ್ರು ಶಕ್ತಿಕೇಂದ್ರ ವತಿಯಿಂದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಶನಿವಾರ ಒಳಮೊಗ್ರು ಗ್ರಾಮ ವ್ಯಾಪ್ತಿಗೆ ಬಂದಿದ್ದ ಸಂಸದರನ್ನು ಇಲ್ಲಿನ ಬಿಜೆಪಿ ಪ್ರಮುಖರು ಕೈಕಾರದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು, ಬಿಜೆಪಿ ಜಿಲ್ಲಾ ಎಸ್‌ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಪ್ರಕಾಶ್ಚಂದ್ರ ರೈ, ದಕ್ಷಿಣ ಕನ್ನಡ ಟೆಲಿಕಾಂ ಸಲಹಾ ಮಂಡಳಿ ಸದಸ್ಯ ನಿತೀಶ್ ಕುಮಾರ್ ಶಾಂತಿವನ, ನೆಟ್ಟಣಿಗೆ ಮುಡ್ನೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಗ್ರಾಪಂ ಸದಸ್ಯರಾದ ಮಹೇಶ್ ಕೇರಿ, ರೇಖಾ ಯತೀಶ್, ಬಿಜೆಪಿ ಮುಖಂಡ ಸಚಿನ್ ರೈ ಪಾಪೆಮಜಲು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net