

ಹಾಸನ: ಯಗಚಿಹೊಳೆ ಬಳಿ ಇರುವ ಉಪ್ಪಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ಇದ್ದ ಡಿವೈಡರ್‌ನಲ್ಲಿ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಶಾಸಕ ಸ್ವರೂಪ್ ಪ್ರಕಾಶ್ ಹಾಗೂ ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಭಾಗದಲ್ಲಿ ನವಕೀಸ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸುಮಾರು 30 ಹಳ್ಳಿಗಳ ಜನರು ಓಡಾಡಲು ಅನುಕೂಲವಾಗುತ್ತಿತ್ತು. ಆದರೆ, ಈಗ ಡಿವೈಡರ್ ಮುಚ್ಚಿರುವುದರಿಂದ ಸುಮಾರು 3 ಕಿಲೋ ಮೀಟರ್ ಬಳಸಿಕೊಂಡು ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಇದನ್ನು ತೆರವು ಮಾಡಿ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಿದರು.
ಸ್ಥಳೀಯ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಗ್ರಾಮಸ್ಥರು ಇದ್ದರು.