ಬಸ್ ನಿಲ್ದಾಣದಲ್ಲಿ ಪೆಟ್ರೋಲ್ ಬಂಕ್ ನಿರ್ಮಾಣ ಬೇಡ

Appeal to Santhosh
Appeal to Santhosh against petrolbunk
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ನಗರದ ಹೊಸ ಬಸ್ ನಿಲ್ದಾಣದಲ್ಲಿ ಖಾಸಗಿ ವ್ಯಕ್ತಿಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬಂಕ್ ತೆರೆಯುವ ಹುನ್ನಾರ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡಬಾರದು ಎಂದು ಕನ್ನಡಿಗರ ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ಚಂದ್ರಶೇಖರ್ ಮನವಿ ಮಾಡಿದರು.
ಖಾಸಗಿ ಬಂಡವಾಳ ಶಾಹಿಗಳ ಲಾಬಿಗೆ ಮಣಿಯದೆ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮಾಡಿ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿ ದೊಡ್ಡಬಳ್ಳಾಪುರ ಘಟಕದ ವ್ಯವಸ್ಥಾಪಕ ಎಸ್‌ಆರ್ ಸಂತೋಷ್ ಅವರಿಗೆ ಮನವಿ ನೀಡಿ ಮಾತನಾಡಿದರು. ಭವಿಷ್ಯದಲ್ಲಿ ದೊಡ್ಡಬಳ್ಳಾಪುರದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ದಿ. ಆರ್‌ಎಲ್ ಜಾಲಪ್ಪ ಅವರು ಸ್ಥಾಪಿಸಿದ ಹೊಸ ಬಸ್ ನಿಲ್ದಾಣ ಉಳಿಸಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಭಿವೃದ್ಧಿಪಡಿಸಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net