ತಾರಿಹಾಳ ಸರ್ಕಾರಿ ಪಾಲಿಟೆಕ್ನಿಕ್‌ನ ಅವ್ಯವಸ್ಥೆ ಸರಿಪಡಿಸಲು ಮನವಿ

26 Dwd 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಹುಬ್ಬಳ್ಳಿಯ ತಾರಿಹಾಳದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಅವ್ಯವಸ್ಥೆ ಸರಿಪಡಿಸಲು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಕಾಲೇಜಿನಲ್ಲಿ ಸುಮಾರು 350 ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಉಪನ್ಯಾಸಕರು ಪಾಠ ಮಾಡದೆ ಹಾಜರಿ ದಾಖಲಿಸಿ ಹೋಗುತ್ತಿದ್ದಾರೆ. ಕೆಲ ಸಿಬ್ಬಂದಿ ಮದ್ಯಪಾನ ಮಾಡಿ ಬರುತ್ತಾರೆ. ಕಾಲೇಜಿನ ಕೊಠಡಿಗಳು ಶಿಥಿಲಗೊಂಡಿದ್ದು, ಸಿಮೆಂಟ್ ಚೂರುಗಳು ಬೀಳುತ್ತಿವೆ. ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿ ತರಗತಿಗೆ ಹಾಜರಾಗಬೇಕಿದೆ. ಮೂಲ ಸೌಕರ್ಯದ ಕೊರತೆಯೂ ಇಲ್ಲಿದೆ. ಕೂಡಲೇ ಗಮನ ಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರರಿಗೆ ಮನವಿ ಸಲ್ಲಿಸಿದರು.

ಅರುಣ ಅಮರಗೋಳ, ವಿಜಯ ಕಲ್ಲೂರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net