ಅಕ್ರಮ ಗಣಿಗಾರಿಕೆ ಸ್ಥಗಿತಗೊಳಿಸಲು ಮನವಿ

New Project (10)
Published on

ಬಂಟ್ವಾಳ: ಪಲ್ಲಮಜಲಿನ ಕುವಡ್ಕ ಎಂಬಲ್ಲಿ ಕೆಲ ವರ್ಷಗಳಿಂದ ನಡೆಯುತ್ತಿರುವ ಕಪ್ಪುಕಲ್ಲಿನ ಅಕ್ರಮ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಗ್ರಾಮಸ್ಥರು ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ಅಕ್ರಮ ಗಣಿಗಾರಿಕೆಗೆ ತೀವ್ರವಾದ ಸ್ಫೋಟಕಗಳನ್ನು ಬಳಸುವುದರಿಂದ ಮನೆಗಳು ಕಂಪನಗೊಳ್ಳುತ್ತಿದ್ದಲ್ಲದೆ ರಸ್ತೆಗಳಿಗೂ ಹಾನಿಯಾಗಿದೆ ಎಂದು ಸ್ಥಳೀಯರು ತಹಸೀಲ್ದಾರ್ ಅರ್ಚನಾ ಭಟ್ ಅವರನ್ನು ಭೇಟಿಯಾಗಿ ಅಹವಾಲು ಸಲ್ಲಿಸಿದರು.

ಈಗಾಗಲೇ ಈ ಕುರಿತು ಸ್ಥಳ ಪರಿಶೀಲನೆ ನಡೆಸಲು ಸೂಚಿಸಲಾಗಿದ್ದು, ಗಣಿ ಇಲಾಖೆಗೂ ಮಾಹಿತಿ ನೀಡಲಾಗಿದೆ. ಸಮಸ್ಯೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮನವಿ ಸ್ವೀಕರಿಸಿದ ತಹಸೀಲ್ದಾರ್ ತಿಳಿಸಿದರು.

ಪ್ರಮುಖರಾದ ರಫೀಕ್, ಹರ್ಷಿತ್, ಸಾದಿಕ್ ಪಲ್ಲಮಜಲು, ಚಂದ್ರಹಾಸ, ಹರೀಶ್, ಉಮಾವತಿ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net