ಅಕ್ರಮ ಮದ್ಯ ಮಾರಾಟ ತಡೆಯಲು ಕರವೇ ಮನವಿ

manavi karnataka raxana vedike
Published on

ಹಾನಗಲ್ಲ: ತಾಲೂಕಿನ ಯಲಿವಾಳ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಗ್ರಾಮದ ಸ್ವಾಸ್ಥ್ಯ ಹಾಳಾಗುತ್ತಿದೆ. ಕೂಡಲೇ ಅಕ್ರಮ ಮದ್ಯ ಮಾರಾಟ ತಡೆಯಬೇಕು ಎಂದು ಪಿಎಸ್​ಐ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಯಲಿವಾಳ ಗ್ರಾಮದಲ್ಲಿ ಬೀಡಿ, ಚಹಾ ಅಂಗಡಿಗಳು ಸೇರಿದಂತೆ ಎಲ್ಲೆಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಗ್ರಾಮದ ಹಿರಿಯರು ಮದ್ಯ ಮಾರಾಟ ತಡೆಯಲು ಮುಂದಾದರೆ, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿಯೇ ಮಾರಾಟ ಮಾಡುತ್ತಿರುವುದಾಗಿ ಹೇಳುತ್ತಿದ್ದಾರೆ. ಅಕ್ರಮ ಮದ್ಯ ಮಾರಾಟದಿಂದ ಕೃಷಿಕರ, ಕೂಲಿಕಾರರ ಕುಟುಂಬಗಳಿಗೆ ಆರ್ಥಿಕ ಸಮಸ್ಯೆ ಎದುರಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಕೂಡಲೇ ಅಕ್ರಮ ಮದ್ಯ ಮಾರಾಟ ತಡೆಗಟ್ಟಬೇಕು. ಈ ಕುರಿತಂತೆ ಕಾನೂನು ಕ್ರಮ ಕೈಗೊಳ್ಳಲು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಕರವೇ ತಾಲೂಕು ಅಧ್ಯಕ್ಷ ಎನ್.ಬಿ. ಮಲ್ಲಮ್ಮನವರ, ಪದಾಧಿಕಾರಿಗಳಾದ ಹನುಮಂತಪ್ಪ ಮುದ್ದಿನಕೊಪ್ಪ, ರಾಮಣ್ಣ ಹರಿಜನ, ಸುರೇಶ ಮುದಕಣ್ಣನವರ, ಕರಿಯಪ್ಪ ಹರಿಜನ, ರವಿ ಚಲುವಾದಿ, ಫಕೀರಪ್ಪ ಚಲುವಾದಿ, ಜಯಶೀಲಾ ಮುದ್ದಿನಕೊಪ್ಪ, ರೇಣುಕಾ ಹರಿಜನ, ಜಯಮ್ಮ ಹರಿಜನ, ರೂಪಾ ಹರಿಜನ, ನೀಲಪ್ಪ ಹರಿಜನ, ಹರೀಶ ಮುದ್ದಿನಕೊಪ್ಪ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net