ಕಡಬದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ

Kdb_Request
Published on

ಕಡಬ: ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಶೇಷಾದ್ರಿ ನೇತೃತ್ವದಲ್ಲಿ ಕಡಬ ತಹಸೀಲ್ದಾರ್ ಪ್ರಭಾಕರ ಖಜೂರೆ ಅವರ ಮುಖಾಂತರ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಇತ್ತೀಚೆಗೆ ಮನವಿ ಸಲ್ಲಿಸಲಾಯಿತು. ಉಪತಹಸೀಲ್ದಾರ್ ಸಯಾದುಲ್ಲಖಾನ್ ಉಪಸ್ಥಿತರಿದ್ದರು.

ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಆ್ಯಪ್, ವೆಬ್ ಅಪ್ಲಿಕೇಷನ್‌ಗಳು ಸಹಿತ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಕಡಬ ತಾಲೂಕು ಘಟಕದಿಂದ, ಕಡಬ ತಹಸೀಲ್ದಾರ್ ಮೂಲಕ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಬೇಡಿಕೆಗಳು ಈಡೇರದಿದ್ದಲ್ಲಿ ಸೆ.26ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಗ್ರಾಮ ಆಡಳಿತಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಮೊಬೈಲ್ ಆ್ಯಪ್ ಮತ್ತು ವೆಬ್ ಅಪ್ಲಿಕೇಷನ್‌ಗಳಿಂದ ಸಮಸ್ಯೆ

ಕಂದಾಯ ಇಲಾಖೆಯಿಂದ ಅಭಿವೃದ್ಧಿಪಡಿಸಲಾಗಿರುವ ಸುಮಾರು 17ಕ್ಕೂ ಅಧಿಕ ಮೊಬೈಲ್/ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಆವಶ್ಯಕ ಮೊಬೈಲ್, ಲ್ಯಾಪ್‌ಟಾಪ್ ಮತ್ತು ಇಂಟರ್‌ನೆಟ್, ಸ್ಕಾೃನರ್‌ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ಕ್ಷೇತ್ರಮಟ್ಟದಲ್ಲಿ ಅಧಿಕ ಒತ್ತಡ ಉಂಟಾಗಿದೆ. ಇದರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ವಿಪರೀತ ಒತ್ತಡವುಂಟಾಗಿ ಆರೋಗ್ಯ ಸಮಸ್ಯೆಗಳೂ ಉಂಟಾಗಿದೆ. ಇದರ ಜತೆ ಇಲಾಖೆಗೆ ಸಂಬಂಧಿಸಿದ ಅನೇಕ ಬೇಡಿಕೆಗಳಿದ್ದು ಈಡೇರದಿದ್ದಲ್ಲಿ ಸೆ.26ರಿಂದ ಮುಷ್ಕರ ನಡೆಯಲಿದೆ ಎಂದು ಗ್ರಾಮ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಸೆ.26ರಿಂದ ಎಲ್ಲ ಬಗೆಯ ಮೊಬೈಲ್ ಆ್ಯಪ್ ಮತ್ತು ವೆಬ್ ಅಪ್ಲಿಕೇಷನ್ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರ ರಾಜ್ಯವ್ಯಾಪಿ ನಡೆಯಲಿದೆ ಎಂದು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಶೇಷಾದ್ರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net