ಗಣೇಶೋತ್ಸವಕ್ಕೆ ನಿರ್ಬಂಧ ಬೇಡ

0101
Published on

ಬೆಳಗಾವಿ: ಕರೊನಾ ವೈರಸ್ ನಿಯಂತ್ರಣಕ್ಕೆ ಸರ್ಕಾರ ಅಳವಡಿಸಿರುವ ನಿಯಮಾವಳಿ ಅನುಸರಿಸಿ ಗಣೇಶೋತ್ಸವ ಆಚರಿಸಲು ಬೆಳಗಾವಿ ಜನತೆ ಸಿದ್ಧರಾಗಿದ್ದು, ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ಹೇರಬಾರದು ಎಂದು ಒತ್ತಾಯಿಸಿ ಬೆಳಗಾವಿ ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳ ಧುರೀಣರು, ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಗುರುವಾರ ಮನವಿ ಸಲ್ಲಿಸಿದರು.

ಕರೊನಾ ಸೋಂಕು ತಡೆಯುವ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ರದ್ದುಗೊಳಿಸಿದೆ ಎಂದು ಸಿ.ಎಂ. ಯಡಿಯೂರಪ್ಪ ತಿಳಿಸಿರುವ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿವೆ. ಸರ್ಕಾರ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಗಣೇಶೋತ್ಸವವನ್ನೇ ರದ್ದುಗೊಳಿಸುವುದು ಸರಿಯಲ್ಲ ಎಂದರು ಜಿಲ್ಲಾಧಿಕಾರಿಗೆ ತಿಳಿಸಿದರು.

ಈಗಾಗಲೇ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ, ಗಣೇಶೋತ್ಸವಕ್ಕೆ ಅವಕಾಶ ಮಾಡಿಕೊಡಲು ವಿನಂತಿಸಿವೆ. ಸರ್ಕಾರ ಗಣೇಶ ಉತ್ಸವಕ್ಕೆ ನಿರ್ಬಂಧ ಹೇರಿದ್ದರೆ, ತೆರವುಗೊಳಿಸಿ ಆದೇಶ ಹೊರಡಿಸಬೇಕು ಎಂದು ಮನವಿ ನೀಡಿದರು. ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳದ ಧುರೀಣರಾದ ರಮಾಕಾಂತ ಕೊಂಡುಸ್ಕರ್, ಶಿವರಾಜ ಪಾಟೀಲ, ರಣಜಿತ್ ಚವ್ಹಾಣ ಪಾಟೀಲ, ವಿಕಾಸ ಆರ್. ಕಲಘಟಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net